ಸಿಂದಗಿ: ‘ಸಮುದಾಯ ಭವನಗಳು ಸಮಾಜಮುಖಿ ಆಗಿರಬೇಕು. ಬಡಜನತೆಗೆ ಸಮುದಾಯ ಭವನಗಳು ಅತ್ಯಂತ ಉಪಯುಕ್ತವಾಗಿವೆ’ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಲೋಕೋಪಯೋಗಿ ಇಲಾಖೆಯ 2025-26ನೇ ಸಾಲಿನ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ₹25 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಬಡ ಕುಟುಂಬಗಳು ಕಾರ್ಯಕ್ರಮಗಳನ್ನು ಅತ್ಯಂತ ಕಡಿಮೆ ಹಣದಲ್ಲಿ ನಿರ್ವಹಣೆ ಮಾಡಿಕೊಳ್ಳಲು ಸಮುದಾಯ ಭವನಗಳು ಸಹಾಯಕವಾಗುತ್ತವೆ. ಎಪಿಎಂಸಿ ಆವರಣದಲ್ಲಿನ ಗಣೇಶ ದೇವಸ್ಥಾನದ ಬಳಿ ಸಮುದಾಯ ಭವನ ಶೀಘ್ರದಲ್ಲಿಯೇ ಲೋಕಾರ್ಪಣೆಗೊಳ್ಳಲಿದೆ. ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.

‘ರಾಜ್ಯ ಸರ್ಕಾರದಲ್ಲಿ ಅನುದಾನದ ಕೊರತೆ ಇಲ್ಲ. ಎಪಿಎಂಸಿಯಲ್ಲಿ ಅಗತ್ಯ ಸೌಕರ್ಯ ಕಲ್ಪಿಸಲಾಗುವುದು. ರೈತರ ಬೇಡಿಕೆಗಳನ್ನು ಹಂತ ಹಂತ ಈಡೇರಿಸಲಾಗುವುದು’ ಎಂದು ಭರವಸೆ ನೀಡಿದರು.

ಎಪಿಎಂಸಿ ಅಧ್ಯಕ್ಷ ಕಲ್ಲಪ್ಪ ಬಿಸನಾಳ, ಉಪಾಧ್ಯಕ್ಷ ಬಸವರಾಜ ಮಾರಲಬಾವಿ, ವರ್ತಕರಾದ ಮಹಾದೇವಪ್ಪ ಮುಂಡೇವಾಡಗಿ, ಅಶೋಕ ವಾರದ, ಉಮೇಶ ಜೋಗೂರ, ಬಸವರಾಜ ಶಹಾಪೂರ, ಶರಣಯ್ಯ ಮಠ, ಆರ್.ಐ.ಸಾವಳಗಿ, ಬಸಯ್ಯ ಹಿರೇಮಠ, ಮುತ್ತು ಮುಂಡೇವಾಡಗಿ, ನಾರಾಯಣ ಕುಲಕರ್ಣಿ, ಬಾಬು ಕಮತಗಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-26-1406243925

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.