ಸಿಂದಗಿ: ‘ನಾರಾಯಣಪುರ ಜಲಾಶಯದಿಂದ ಇಂಡಿ ಶಾಖಾ ಕಾಲುವೆ, ಇಂಡಿ ಏತ ನೀರಾವರಿ ಕಾಲುವೆಗಳ ಮೂಲಕ ಬರುತ್ತಿರುವ 2 ಟಿಎಂಸಿ ಅಡಿ ನೀರಿನಿಂದ ವಿಜಯಪುರ-ಕಲಬುರಗಿ ಜಿಲ್ಲೆಗಳ ನೀರಿನ ಬವಣೆ ದೂರಾಗುವುದಿಲ್ಲ. 3 ಟಿಎಂಸಿ ಅಡಿ ನೀರು ಹರಿಸಬೇಕು’ ಎಂದು ಸಿಂದಗಿ ಮತಕ್ಷೇತ್ರದ ಶಾಸಕ ಅಶೋಕ ಮನಗೂಳಿ, ಕಲಬುರಗಿ ಜಿಲ್ಲೆಯ ಜೇವರ್ಗಿ ಮತಕ್ಷೇತ್ರದ ಶಾಸಕ ಡಾ.ಅಜಯಸಿಂಗ್ ಜಂಟಿಯಾಗಿ ಆಗ್ರಹಿಸಿದ್ದಾರೆ.

ತಾಲ್ಲೂಕಿನ ರಾಂಪುರ ಪಿ.ಎ. ಗ್ರಾಮದಲ್ಲಿನ ಕೃಷ್ಣಾ ಭಾಗ್ಯ ಜಲನಿಗಮದ ಮುಖ್ಯ ಎಂಜಿನಿಯರ್ ಕಾರ್ಯಾಲಯದಲ್ಲಿ ಗುರುವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಜೇವರ್ಗಿ ತಾಲ್ಲೂಕಿನ ಅಲ್ಲಾಪುರ, ಅರಳಗುಂಡಗಿ, ಬಳೂಂಡಗಿ ಗ್ರಾಮಗಳ ರೈತರ ಜಮೀನುಗಳಿಗೆ ನೀರು ತಲುಪುತ್ತಿಲ್ಲ. 3 ಟಿಎಂಸಿ ಅಡಿ ನೀರು ಹರಿಸಲು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ದೂರವಾಣಿ ಮೂಲಕ ಒತ್ತಾಯಿಸಲಾಗಿದೆ’ ಎಂದು ತಿಳಿಸಿದ್ದಾರೆ.

‘ಹೆಚ್ಚುವರಿ ನೀರು ಬಂದರೆ ಸಿಂದಗಿ, ಇಂಡಿ, ದೇವರಹಿಪ್ಪರಗಿ, ನಾಗಠಾಣ, ಚಡಚಣ, ಜೇವರ್ಗಿ, ಅಫಜಲಪುರ ತಾಲ್ಲೂಕುಗಳು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ದೊರಕುತ್ತದೆ’ ಎಂದು ಶಾಸಕ ಅಶೋಕ ಮನಗೂಳಿ ತಿಳಿಸಿದ್ದಾರೆ.

ಸಭೆಯಲ್ಲಿ ಕೆಬಿಜೆಎನ್ಎಲ್ ಎಸ್ಇ ಮನೋಜಕುಮಾರ, ಡಬ್ಲುಇ ಉಜ್ವಲ ಸೋನಾವನೆ ಹಾಗೂ ಬಳುಂಡಗಿ ರೈತರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-26-844656854

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.