ಸಿಂದಗಿ: ನಗರದಲ್ಲಿ 14 ವರ್ಷಗಳ ನಂತರ ನಡೆಯಲಿರುವ 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಗ್ರಾಮೀಣ ಭಾಗದ ಮಹಿಳೆಯರಿಂದ ವಿಶೇಷವಾಗಿ ಬುತ್ತಿ ಜಾತ್ರೆ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು.

ಇಲ್ಲಿಯ ತಾಲ್ಲೂಕು ಪಂಚಾಯಿತಿ ಸಭಾ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕ ಬುಧವಾರ ಹಮ್ಮಿಕೊಂಡಿದ್ದ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಮೊದಲ ದಿನ ಸಮ್ಮೇಳನದ ಸರ್ವಾಧ್ಯಕ್ಷರನ್ನು ಕುಂಭಮೇಳದೊಂದಿಗೆ ಸಾರೋಟಿನಲ್ಲಿ ಮೆರವಣಿಗೆ ಮೂಲಕ ವೇದಿಕೆಗೆ ಬರಮಾಡಿಕೊಳ್ಳಲಾಗುವುದು. ಎರಡನೇ ದಿನ ತಾಲ್ಲೂಕಿನ ವಿವಿಧ ಗ್ರಾಮಗಳ ಮಹಿಳೆಯರಿಂದ ಬುತ್ತಿಜಾತ್ರೆ ನಡೆಯಲಿದೆ. ನಂತರ ಮಹಿಳಾಗೋಷ್ಠಿ, ವಚನ ಸಾಹಿತ್ಯಗೋಷ್ಠಿ, ಬಂಡಾಯ ಸಾಹಿತ್ಯ ಗೋಷ್ಠಿ, ಕವಿಗೋಷ್ಠಿ ಹೀಗೆ ವಿವಿಧ ಗೋಷ್ಠಿಗಳು ನಡೆಯಲಿವೆ. ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ’ ಎಂದರು.

ಆಲಮೇಲ-ಸಿಂದಗಿ ಅವಳಿ ತಾಲ್ಲೂಕುಗಳ ವೈದ್ಯರ ಸಂಘದ ಅಧ್ಯಕ್ಷ ಡಾ.ಸಂದೀಪ ಪಾಟೀಲ ಮಾತನಾಡಿದರು. ಕ.ಸಾ.ಪ ತಾಲ್ಲೂಕು ಘಟಕದ ಅಧ್ಯಕ್ಷ ವೈ.ಸಿ.ಮಯೂರ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕ.ಸಾ.ಪ ತಾಲ್ಲೂಕು ಶಾಖೆ ಗೌರವ ಕಾರ್ಯದರ್ಶಿ ಆನಂದ ಶಾಬಾದಿ, ರಾಜಶೇಖರ ನರಗೋದಿ ಕಾರ್ಯಕ್ರಮ ನಿರ್ವಹಿಸಿದರು. ಆಯುಷ್ ವೈದ್ಯರ ಸಂಘದ ತಾಲ್ಲೂಕು ಶಾಖೆ ಅಧ್ಯಕ್ಷ ಶಿವಾನಂದ ಹೊಸಮನಿ, ವೈದ್ಯ ಸಿ.ಸಿ.ಹಿರೇಗೌಡರ, ತಾಲ್ಲೂಕು ಆಯುಷ್ ವೈದ್ಯಾಧಿಕಾರಿ ಮಹಾಂತೇಶ ಹಿರೇಮಠ, ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-26-73822403

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.