ಸಿಂದಗಿ: 12ನೇ ಶತಮಾನದ ಮಹಾನ್ ಶರಣ ಬಸವಣ್ಣನವರು ಮಾನವಕುಲಕ್ಕೆ ನೀಡಿದ ಸಂದೇಶ ದಾರಿದೀಪವಾಗಿದೆ. ಅವರ ತತ್ವಾದರ್ಶಗಳನ್ನು ಯುವಪೀಳಿಗೆಯವರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ಆಶಯ ವ್ಯಕ್ತಪಡಿಸಿದರು.

ನಗರದ ಬಸವೇಶ್ವರ ವೃತ್ತದಲ್ಲಿ ಸೋಮವಾರ ಬಸವ ಜಯಂತ್ಯುತ್ಸವದ ಅಂಗವಾಗಿ ರಾಷ್ಟ್ರೀಯ ಬಸವದಳ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಷಟಸ್ಥಲ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಇಲ್ಲಿಯ ಬಸವ ಮಂಟಪದಲ್ಲಿ ಕಳೆದ 15 ದಿನಗಳಿಂದ ಸಾಗಿ ಬಂದ ಬಸವ ಪುರಾಣ-ಪ್ರವಚನ ಕಾರ್ಯಕ್ರಮದಲ್ಲಿ ನಿತ್ಯ ಬಸವತತ್ವ ಪ್ರಸಾರ ಮಾಡಲಾಗಿರುವುದು ಶ್ಲಾಘನೀಯ ಕಾರ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಂತರ ಸಾರೋಟದಲ್ಲಿನ ಬಸವಣ್ಣನವರ ಭಾವಚಿತ್ರದ ಮೆರವಣಿಗೆಗೆ ಶಾಸಕ ಅಶೋಕ ಮನಗೂಳಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಶಾಖೆ ಅಧ್ಯಕ್ಷ ಅಶೋಕ ವಾರದ ಅವರು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು.

ತಹಶೀಲ್ದಾರ್ ಕರೆಪ್ಪ ಬೆಳ್ಳಿ, ತಹಶೀಲ್ದಾರ್ ಗ್ರೇಡ್-2 ಇಂದಿರಾಬಾಯಿ ಬಳಗಾನೂರ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಹಣಮಂತ ಸುಣಗಾರ, ರಾಷ್ಟ್ರೀಯ ಬಸವದಳದ ಅಧ್ಯಕ್ಷ ಮಲ್ಲಿಕಾರ್ಜುನ ಅರ್ಜುಣಗಿ, ಸೋಮನಗೌಡ ಬಿರಾದಾರ, ಚನ್ನೂ ವಾರದ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುರೇಶ ಪೂಜಾರಿ, ಲಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ, ಸರ್ಕಾರಿ ನೌಕರರ ಸಂಘ ಶಾಖೆ ಅಧ್ಯಕ್ಷ ಅಶೋಕ ತೆಲ್ಲೂರ, ಪ್ರೊ.ರ.ವಿ ಗೋಲಾ, ಶಿವಾನಂದ ಕಲಬುರ್ಗಿ, ಸಿದ್ಧಬಸವ ಕುಂಬಾರ, ಗುರುಪಾದ ತಾರಾಪುರ, ಆರ್.ಆರ್.ಪಾಟೀಲ, ಶಿವಕುಮಾರ ಶಿವಸಿಂಪಿ, ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-26-1564078763

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.