ಸಿಂದಗಿ: ‘ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಆಧ್ಯಾತ್ಮಿಕ ಚಿಂತನಾ ಚಿಲುಮೆ. ಭಗವಂತನ ಸಾಕ್ಷಾತ್ಕಾರ ಪಡೆಯಲು ಮಾರ್ಗ ತೋರಿದ ಶರಣೆ’ ಎಂದು ನಿವೃತ್ತ ಮುಖ್ಯಶಿಕ್ಷಕ ರುದ್ರಗೌಡ ಬಿರಾದಾರ ಹೇಳಿದರು.

ನಗರದ ಪ್ರಜಾಸೌಧ ಆವರಣದಲ್ಲಿ ಭಾನುವಾರ ತಾಲ್ಲೂಕು ಆಡಳಿತ ಹಮ್ಮಿಕೊಂಡಿದ್ದ ಶಿವಶರಣೆ ಹೇಮರಡ್ಡಿ ಮಲ್ಲಮ್ಮನವರ ಜಯಂತ್ಯುತ್ಸವ ಸಮಾರಂಭದಲ್ಲಿ ಮಾತನಾಡಿದರು.

‘ಶರಣೆ ಹೇಮರಡ್ಡಿ ಮಲ್ಲಮ್ಮನವರ ಜೀವನ ಚರಿತ್ರೆ ಮನುಕುಲಕ್ಕೆ ದಾರಿದೀಪವಾಗಿದೆ’ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಕರೆಪ್ಪ ಬೆಳ್ಳಿ ಮಾತನಾಡಿ, ‘ಮಹಾಸಾದ್ವಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮನವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಸಾತ್ವಿಕ ಬದುಕು ರೂಪಿಸಿಕೊಂಡಾಗಲೇ ಜಯಂತಿ ಆಚರಣೆ ಸಾರ್ಥಕತೆ ಪಡೆದುಕೊಳ್ಳುತ್ತದೆ’ ಎಂದು ಹೇಳಿದರು.

ಸಂಗನಗೌಡ ಪಾಟೀಲ ಒಳಗೊಂಡಂತೆ ರೆಡ್ಡಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-26-1148680068

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.