ಸಿಂದಗಿ: ನಗರದ ಸಾರಂಗಮಠದ ಆವರಣದಲ್ಲಿನ ಸಿದ್ಧಲಿಂಗಸ್ವಾಮೀಜಿ ಕಾನ್ಫರೆನ್ಸ್ ಹಾಲ್ನಲ್ಲಿ ಚೆನ್ನವೀರಸ್ವಾಮೀಜಿ ಪ್ರತಿಷ್ಠಾನದ ವತಿಯಿಂದ ಮೇ 1 ರಂದು ಸಂಜೆ 6.30ಕ್ಕೆ ಸದ್ವಿಚಾರಗೋಷ್ಠಿ ಹಮ್ಮಿಕೊಳ್ಳಲಾಗಿದೆ.

ಸಾರಂಗಮಠ-ಗಚ್ಚಿನಮಠದ ಪೀಠಾಧ್ಯಕ್ಷರಾದ ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ, ಶ್ರೀಮಠದ ಉತ್ತರಾಧಿಕಾರಿ ವಿಶ್ವಪ್ರಭುದೇವ ಶಿವಾಚಾರ್ಯ ಸ್ವಾಮೀಜಿ ಸಮ್ಮುಖದಲ್ಲಿ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕೃತರಾದ ವಿಜಯಪುರ ಗ್ರಾಮೀಣ ಉಪವಿಭಾಗದ ಡಿವೈಎಸ್ಪಿ ತುಳಜಾರಾಂ ಸುಲ್ಪಿ ಅವರು ಸೇವಾ ಧರ್ಮ ಕುರಿತಾಗಿ ಉಪನ್ಯಾಸ ನೀಡುವರು.

ಶಾಸಕ ಅಶೋಕ ಮನಗೂಳಿ ಅಧ್ಯಕ್ಷತೆ ವಹಿಸಿಕೊಳ್ಳುವರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕೃತರಾದ ಸಿಂದಗಿ ಠಾಣೆ ಸಬ್ ಇನ್ಸ್ಪೆಕ್ಟರ್ ಶ್ರೀಕಾಂತ ಕಾಂಬಳೆ ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಿಂದ ಪಿಎಚ್ಡಿ ಪದವಿ ಪುರಸ್ಕೃತರಾದ ನಗರದ ಪದ್ಮರಾಜ ಬಿ.ಇಡಿ ಕಾಲೇಜು ಪ್ರಾಚಾರ್ಯೆ ಜಗದೇವಿ ನಂದಿಕೋಲ, ಬಿಎಸ್ಡಬ್ಲೂ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದ ಇಲ್ಲಿಯ ಪದ್ಮರಾಜ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಮೀನಾಜ್ ಗೋಲಗೇರಿ ಹಾಗೂ ಇದೇ ಪರೀಕ್ಷೆಯಲ್ಲಿ 4ನೇ ರ್ಯಾಂಕ್ ಪಡೆದುಕೊಂಡ ರಿಯಾನಾಬೇಗಂ ಬಂಕಲಗಿ ಮತ್ತು ಮಹಿಳಾ ವಿ.ವಿ ಮಟ್ಟದ ಆಟಗಾರ್ತಿಯರಾದ ಸಿದ್ದಮ್ಮ ಬಿರಾದಾರ, ಶೈಲಜಾ ಪಾಟೀಲ ಇವರನ್ನು ಗೌರವಿಸಲಾಗುವುದು ಎಂದು ಪ್ರತಿಷ್ಠಾನ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-26-39484745

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.