ತಾಳಿಕೋಟೆ: ವಿದ್ಯಾರ್ಥಿಗಳು ಕನಸುಗಳ ಜೊತೆಗೆ ಯೋಜನೆಗಳನ್ನು ಹಾಕಿ ನಿಮ್ಮ ಬದುಕು ಸುಂದರಗೊಳಿಸಿಕೊಳ್ಳಬೇಕು ಎಂದು ಬೆಂಗಳೂರು ಆದರ್ಶ ಗ್ರೂಪ್ನ ವ್ಯಕ್ತಿತ್ವ ವಿಕಸನ ತರಬೇತುದಾರ ಬಸವರಾಜ ಉಮರಾಣಿ ಹೇಳಿದರು.

ಪಟ್ಟಣದ ವೀರಶೈವ ವಿದ್ಯಾವರ್ಧಕ ಸಂಘದ ಎಸ್.ಕೆ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಕಾಲೇಜಿನಲ್ಲಿ ಶುಕ್ರವಾರ ನಡೆದ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆ, ಎನ್ಎಸ್ಎಸ್, ಎನ್ಸಿಸಿ, ವೈಆರ್ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿವಿಧ ಚಟುವಟಿಕೆಗಳ ಮುಕ್ತಾಯ ಸಮಾರಂಭ ಹಾಗೂ ವಿದ್ಯಾರ್ಥಿಗಳ ಬೀಳ್ಕೋಡುವ ಸಮಾರಂಭದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ರಾಷ್ಟ್ರದ ಶಕ್ತಿ ಮತ್ತು ಆಸ್ತಿ, ವಿದ್ಯಾರ್ಥಿಗಳು ಪ್ರಾಧ್ಯಾಪಕರಿಂದ ಹೆಚ್ಚಿನ ಜ್ಞಾನ ಪಡೆದುಕೊಳ್ಳುವುದರ ಜೊತೆ ಗ್ರಂಥಾಲಯದಲ್ಲಿ ನಿಮ್ಮ ಬದುಕನ್ನು ರೂಪಿಸಿಕೊಳ್ಳಿ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರನ್ನು ಗೌರವಿಸಲಾಯಿತು. ವಿವಿಧ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾಲೇಜಿನ ಚೇರಮನ್ ವಿ.ಸಿ.ಹಿರೇಮಠ ಮಾತನಾಡಿದರು. ಸಂಘದ ಕಾರ್ಯದರ್ಶಿ ಎಂ.ಎಸ್.ಸರಶೆಟ್ಟಿ, ಸಹಕಾರ್ಯದರ್ಶಿ ಕೆ.ಎಸ್.ಮುರಾಳ, ಪ್ರಾಚಾರ್ಯ ದಯಾನಂದ ಮೂಗಡ್ಲಿಮಠ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.