ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿ@75: ವಿಶೇಷ ಉಪನ್ಯಾಸ, ಪತ್ರಿಕಾ ಏಜೆಂಟರಿಗೆ ಸನ್ಮಾನ ನಾಳೆ

ದರಬಾರ ಕಾಲೇಜಿನಲ್ಲಿ ‘ಪ್ರಜಾವಾಣಿ’ ಅಮೃತ ಮಹೋತ್ಸವ
Last Updated 24 ನವೆಂಬರ್ 2022, 15:19 IST
ಅಕ್ಷರ ಗಾತ್ರ

ವಿಜಯಪುರ:‘ಪ್ರಜಾವಾಣಿ’ ಅಮೃತ ಮಹೋತ್ಸವದ ಅಂಗವಾಗಿ ನಗರದ ವಿದ್ಯಾವರ್ಧಕ ಸಂಘದ ಕಲಾ, ವಾಣಿಜ್ಯ ಮತ್ತು ಬಿಸಿಎ(ದರಬಾರ)ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಸಹಯೋಗದೊಂದಿಗೆ ನವೆಂಬರ್‌ 25ರಂದು ಬೆಳಿಗ್ಗೆ 11.30ಕ್ಕೆ ವಿಶೇಷ ಉಪನ್ಯಾಸ ಹಾಗೂಪತ್ರಿಕಾ ಏಜೆಂಟರಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ.

ವಿದ್ಯಾವರ್ಧಕ ಸಂಘದ ಕಲಾ, ವಾಣಿಜ್ಯ ಮತ್ತು ಬಿಸಿಎ(ದರಬಾರ)ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ‘ಪ್ರಜಾವಾಣಿ’ ಹುಬ್ಬಳ್ಳಿ ಬ್ಯುರೊ ಮುಖ್ಯಸ್ಥರಾದ ರಶ್ಮಿ ಎಸ್‌. ಅವರು‘ಮುದ್ರಣ ಮಾಧ್ಯಮದ ಸವಾಲುಗಳು’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ವಿದ್ಯಾ ವರ್ದಕ ಸಂಘದ ಆಡಳಿತ ಮಂಡಳಿ ಸದಸ್ಯ ವಿಕಾಸ ದರಬಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಘದ ಸಮನ್ವಯ ಅಧಿಕಾರಿ ಡಾ.ವಿ.ಬಿ.ಗ್ರಾಮ ಪುರೋಹಿತ, ಪ್ರಾಚಾರ್ಯ ಜಿ.ಎಚ್‌.ಮಣೂರ, ಸಾಂಸ್ಕೃತಿಕ ಕಾರ್ಯದರ್ಶಿ ಎಸ್‌.ಬಿ.ಕುಂಬಾರ, ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ವಿದ್ಯಾಶ್ರೀ ಗಾಣಿಗೇರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ವಿಜಯಪುರದ ಪತ್ರಿಕಾ ಏಜೆಂಟರಾದ ಸುರೇಶ ಕಲಾದಗಿ, ಬಾಬು ಮಂಗಣವರ ಮತ್ತು ಶಿವಾನಂದ ಹೂಗಾರ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT