ವಿಜಯಪುರ: ಕ್ರೀಡೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಆತ್ಮವಿಶ್ವಾಸದ ಕಲಿಕಾ ಚಟುವಟಿಕೆ ಅಳವಡಿಸಿಕೊಳ್ಳಲು ಸಾಧ್ಯ. ಕ್ರೀಡೆ ಸಂಘಟಿತ, ಸ್ಪರ್ಧಾತ್ಮಕ ಕುಶಲತೆಯಿಂದ ಕೂಡಿದ ದೈಹಿಕ ಚಟುವಟಿಕೆಯಾಗಿದ್ದು, ವಿದ್ಯಾರ್ಥಿಗಳು ಬದ್ಧತೆ ಮತ್ತು ನ್ಯಾಯಯುತ ಆಟವನ್ನು ಆಡಬೇಕು. ಸೋಲು ಗೆಲುವು ಸಮಾನವಾಗಿ ಸ್ವೀಕರಿಸಬೇಕು ಎಂದು ಸಂಸ್ಥೆಯ ಸಂಸ್ಥಾಪಕ ಎಸ್.ಕುಮಾರ್ ಹೇಳಿದರು.

ನಗರದ ಸೋಲಾಪುರ ಪೈಪಾಸ್ ರಸ್ತೆಯಲ್ಲಿರುವ ಎಸ್. ಕುಮಾರ ವಿದ್ಯಾವರ್ಧಕ ಸಂಸ್ಥೆಯ ಸರಸ್ವತಿ ಇಂಗ್ಲಿಷ್ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಾಗೂ ಎಸ್. ಕುಮಾರ ಪಿಯು ಸೈನ್ಸ್ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಅರಕೇರಿ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕ್ರೀಡೆಗಳು ಮನುಷ್ಯನ ಜೀವನಕ್ಕೆ ಅತಿ ಅವಶ್ಯಕವಾಗಿದ್ದು, ವ್ಯಕ್ತಿಯನ್ನು ಸದೃಢ ಹಾಗೂ ಉತ್ತಮ ದೈಹಿಕ ಶಕ್ತನಾಗಿಸಿ ಪ್ರಬಲಗೊಳಿಸುತ್ತದೆ. ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮಕ್ಕಳು ಪರಸ್ಪರ ಗೌರವ ಮತ್ತು ಸಹಕಾರದ ಮೌಲ್ಯಗಳನ್ನು ಬೆಳೆಸಿಕೊಂಡಿರುತ್ತಾರೆ ಎಂದರು.

ಸಂಸ್ಥೆಯ ಅಧ್ಯಕ್ಷ ಡಾ.ಎಚ್.ಟಿ. ಲತಾದೇವಿ ಮಾತನಾಡಿ, ಮನುಷ್ಯನ ಪ್ರವೃತ್ತಗಳಲ್ಲಿ ಕ್ರೀಡೆ ಪ್ರಧಾನ ಪಾತ್ರ ವಹಿಸುತ್ತವೆ. ಮಗುವಿನ ಬಾಲ್ಯದಲ್ಲಿ ಪ್ರಾರಂಭವಾಗುವ ಕ್ರೀಡಾ ಶಕ್ತಿಯು ವಿಶ್ವ ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ಮಾಡುತ್ತದೆ. ಕ್ರೀಡೆಯು ನಮ್ಮ ಆರೋಗ್ಯಕ್ಕೆ ಟಾನಿಕ್ನಂತೆ ಕಾರ್ಯ ನಿರ್ವಹಿಸುತ್ತದೆ. ಪ್ರತಿಯೊಬ್ಬರ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಅತ್ಯಗತ್ಯ ಎಂದರು.

ಕ್ರೀಡಾಕೂಟದಲ್ಲಿ ಅರಕೇರಿ ವಲಯದ ಎಲ್ಲಾ ಸರಕಾರಿ, ಅನುದಾನಿತ, ಅನುದಾನರಹಿತ ಪ್ರೌಢಶಾಲೆಗಳಿಂದ ಸುಮಾರು 600 ಕ್ರೀಡಾಪಟುಗಳು ಭಾಗವಹಿಸಿದ್ದರು. ದೈಹಿಕ ಶಿಕ್ಷಣ ಪರಿವೀಕ್ಷಕ ನಾಮದೇವ ಚವ್ಹಾಣ ಕ್ರೀಡಾಜ್ಯೋತಿ ಬೆಳಗಿಸಿದರು. ಶ್ರೀನಾಥ ಉಕನಾಳ, ಶ್ರೀಧರ ಉಮದಿ, ಪ್ರಶಾಂತ ಪೋಳ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.