ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ದೈಹಿಕ, ಮಾನಸಿಕ ವಿಕಸನಕ್ಕೆ ಕ್ರೀಡೆ ಪೂರಕ’

ತಾಳಿಕೋಟೆ ತಾಲ್ಲೂಕುಮಟ್ಟದ ದಸರಾ ಕ್ರೀಡಾಕೂಟ
Published : 24 ಸೆಪ್ಟೆಂಬರ್ 2024, 15:52 IST
Last Updated : 24 ಸೆಪ್ಟೆಂಬರ್ 2024, 15:52 IST
ಫಾಲೋ ಮಾಡಿ
Comments

ತಾಳಿಕೋಟೆ: ಕ್ರೀಡೆಗಳಿಂದ ಆರೋಗ್ಯ ಸದೃಢಗೊಳ್ಳುತ್ತದೆ. ಅವು ವ್ಯಕ್ತಿಯ ದೈಹಿಕ ಹಾಗೂ ಮಾನಸಿಕ ವಿಕಸನಕ್ಕೆ ಪೂರಕವಾಗಿವೆ. ವಿದ್ಯಾರ್ಥಿಗಳು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ವಿ.ವಿ.ಸಂಘದ ಅಧ್ಯಕ್ಷ ವಿ.ಸಿ.ಹಿರೇಮಠ ಹೇಳಿದರು.

ಅವರು ಪಟ್ಟಣದ ಎಸ್.ಕೆ.ಕಾಲೇಜು ಮೈದಾನದಲ್ಲಿ ನಡೆದ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಬೆಂಗಳೂರಿನ ಕರ್ನಾಟಕ ಕ್ರೀಡಾ ಪ್ರಾಧಿಕಾರ, ವಿಜಯಪುರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ 2024 –25ನೇ ಸಾಲಿನ ತಾಳಿಕೋಟೆ ತಾಲ್ಲೂಕುಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಶನಿವಾರ ಮಾತನಾಡಿದರು.

ಕ್ರೀಡೆಯಲ್ಲಿ ಸೋಲು ಗೆಲುವು ಸಹಜ ಸೋತಾಗ ಕುಗ್ಗದೆ ಗೆದ್ದಾಗ ಹಿಗ್ಗದೆ ಎರಡನ್ನೂ ಸಮಾನವಾಗಿ ಸ್ವೀಕರಿಸಿ. ಯಾವುದೇ ಕ್ರೀಡೆ ಇರಲಿ ಸೋಲು ಗೆಲುವಿನ ಲೆಕ್ಕಾಚಾರ ಮಾಡದೆ ಅದರಲ್ಲಿ ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಿ. ಆಟ ಮತ್ತು ಪಾಠ ಎರಡಕ್ಕೂ ಸಮಾನ ಸ್ಥಾನ ನೀಡಿ ಎಂದು ಸಲಹೆ ನೀಡಿದರು.

ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಬಿ.ವೈ.ಕವಡಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಎಸ್.ಕೆ. ಪದವಿ ಪೂರ್ವ ಕಾಲೇಜಿನ ಚೇರ್ಮನ್ ಎಂ.ಆರ್.ಕತ್ತಿ, ಎಸ್.ಕೆ ಪ್ರೌಢಶಾಲೆಯ ಅಧ್ಯಕ್ಷ ಎಂ.ಜಿ. ಕತ್ತಿ, ಪ್ರಾಚಾರ್ಯ ಕಿಶೋರಕುಮಾರ ಕೆ., ಮುದ್ದೇಬಿಹಾಳದ ಎವೈಎಸ್‌ಒ ಸುರೇಶ ಆಲೂರು, ಆರ್.ಜಿ. ರಾಠೋಡ್. ಜಗದೀಶ ಕಟ್ಟಿಮನಿ. ದೈಹಿಕ ಶಿಕ್ಷಣ ಶಿಕ್ಷಕರಾದ ರಾವುತ್ ಪೂಜಾರಿ, ವಿಶ್ವನಾಥ ಪಾಟೀಲ, ಚಂದ್ರು ಮನಗೂಳಿ, ಗುರು ಸಾಲಿಮಠ ಮಹೇಶ ಛಲವಾದಿ, ಮಲ್ಲು ರಾಯಗೊಂಡ, ವೀರೇಶ್ ಗದಗ, ಭಜಂತ್ರಿ, ನಾಟಿಕಾರ ನಿರ್ಣಾಯಕರಾಗಿ ಕಾರ್ಯ ನಿರ್ವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT