ಮಂಗಳವಾರ, ಜೂನ್ 15, 2021
20 °C

ಶ್ರೀಕೃಷ್ಣ ಜಯಂತಿ ಸಂಭ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶ್ರೀ ಕೃಷ್ಣನ ಚಿತ್ರಕ್ಕೆ ಪುಷ್ಪರ್ಚನೆ ಹಾಗೂ ಪೂಜೆ ಮಾಡುವ ಮೂಲಕ ಮಂಗಳವಾರ ಶ್ರೀ ಕೃಷ್ಣ ಜಯಂತಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಪಿ.ಸುನೀಲ್‍ಕುಮಾರ್ ಶ್ರೀಕೃಷ್ಣ ಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ಅರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ರಾಮ ಅರಿಸಿದ್ದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಹೇಶ ಪೋತದಾರ, ನಿಂಗಪ್ಪ ಗೋಠೆ, ವಿಜಯಪುರ ತಹಶೀಲ್ದಾರ್‌ ಮೋಹನ್ ಕುಮಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ ಹಾಗೂ ಸಮಾಜದ ಮುಖಂಡರಾದ ಸೋಮನಗೌಡ ಕಲ್ಲೂರ, ಭೀಮರಾವ್ ಜಿಗಜಿಣಿಗಿ, ಅಡಿವೆಪ್ಪ ಸಾಲಗಲ್‌, ಫಯಾಜ್ ಕಲಾದಗಿ, ಗಿರೀಶ ಕುಲಕರ್ಣಿ, ಜಯಶ್ರೀ ಭಾರತಿ, ಕುಸುಮಾ ಪವಾರ, ಶಾಸ್ತ್ರೀ ಹೊಸಮನಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕೋವಿಡ್‌ ಹಿನ್ನೆಲೆಯಲ್ಲಿ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.