ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲಿರುವ 38,101 ವಿದ್ಯಾರ್ಥಿಗಳು 

Last Updated 18 ಜುಲೈ 2021, 11:44 IST
ಅಕ್ಷರ ಗಾತ್ರ

ವಿಜಯಪುರ: ಜುಲೈ 19 ಮತ್ತು 22ರಂದು ನಡೆಯಲಿರುವ ಪ್ರಸಕ್ತ ಸಾಲಿನ ಎಸ್‌ಎಸ್ಎಲ್‌ಸಿ ಪರೀಕ್ಷೆಗೆ ಜಿಲ್ಲಾಡಳಿತ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಜುಲೈ 19ರಂದು ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ. ಜುಲೈ 22ರಂದು ಕನ್ನಡ, ಇಂಗ್ಲಿಷ್‌, ಹಿಂದಿ ಸೇರಿದಂತೆ ಭಾಷಾ ವಿಷಯಗಳ ಪರೀಕ್ಷೆಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.30ರ ವರೆಗೆ ನಡೆಯಲಿದೆ. ಉತ್ತರ ಪತ್ರಿಕೆ ಓಎಂಆರ್‌ ರೂಪದಲ್ಲಿ ಇರಲಿದೆ.

ಜಿಲ್ಲೆಯ 18,686 ಬಾಲಕರು, 15 ಸಾವಿರ ಬಾಲಕಿಯರು ಸೇರಿದಂತೆ 33,686 ಹೊಸ ವಿದ್ಯಾರ್ಥಿಗಳ(ಫ್ರೆಶರ್ಸ್‌) ಹಾಗೂ 3120 ಬಾಲಕರು, 1295 ಬಾಲಕಿಯರು ಸೇರಿದಂತೆ 4415 ಪುನರಾವರ್ಥಿತ (ರಿಪೀಟರ್ಸ್‌) ವಿದ್ಯಾರ್ಥಿಗಳು ಸೇರಿದಂತೆ ಒಟ್ಟು38,101 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ.

ಕೋವಿಡ್‌ ಮಾರ್ಗಸೂಚಿಗಳ ಅನ್ವಯ ಜಿಲ್ಲೆಯಲ್ಲಿ ಈ ಬಾರಿ 188 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಕಳೆದ ಸಾಲಿಗಿಂತ ಈ ವರ್ಷ 65 ಹೆಚ್ಚುವರಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.

ಒಂದು ಕೊಠಡಿಯಲ್ಲಿ 12 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾಗುವ ಎಲ್ಲ ಮಕ್ಕಳಿಗೆ ಸಾಧ್ಯವಾದಷ್ಟು ಅವರ ಶಾಲೆಯ ಸಮೀಪದಲ್ಲಿಯೇ ಪರೀಕ್ಷಾ ಕೇಂದ್ರವನ್ನು ರಚಿಸಲಾಗಿದೆ.

4387 ಸಿಬ್ಬಂದಿಯನ್ನು ಎಸ್‌ಎಸ್ಎಲ್‌ಸಿ ಪರೀಕ್ಷೆಗೆ ನಿಯೋಜಿಸಲಾಗಿದೆ. ಪರೀಕ್ಷೆಗೆ ಹಾಜರಾಗುವ ಎಲ್ಲ ಮಕ್ಕಳಿಗೆ ಮತ್ತು ಸಿಬ್ಬಂದಿಗೆ ಎನ್‌–95 ಮಾಸ್ಕ್‌ ನೀಡಲಾಗುತ್ತಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳನ್ನು ಥರ್ಮಲ್ ಸ್ಕ್ಯಾನಿಂಗ್‌ಗೆ ಒಳಪಡಿಸಲು, ಕೈಗಳನ್ನು ಸ್ಕ್ಯಾನಿಟೈಸರ್‌ನಿಂದ ಶುದ್ಧೀಕರಿಸಬೇಕು ಹಾಗೂ ಮಾಸ್ಕ್‌ ಧಾರಣೆ ಕಡ್ಡಾಯಗೊಳಿಸಿ ಪ್ರವೇಶ ನೀಡಲಾಗುತ್ತದೆ.

ಯಾವುದೇ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಕೆಮ್ಮು, ಜ್ವರ, ನೆಗಡಿ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಮುಖ್ಯ ಅಧೀಕ್ಷಕರ ಗಮನಕ್ಕೆ ತಂದು ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಕ್ರಮ ವಹಿಸಲಾಗಿದೆ.

ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿ ಮತ್ತು ಇತರರು ಮೊಬೈಲ್ ಫೋನ್‌ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಕೇವಲ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಬೇಸಿಕ್ ಮೊಬೈಲ್ ಸೆಟ್‌ ಅನ್ನು ಮಾತ್ರ ಬಳಸಬಹುದಾಗಿದೆ.

ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿನ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್‌ ಸೆಂಟರ್‌‌ಗಳು, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ಪರೀಕ್ಷೆ ಮುಕ್ತಾಯವಾಗುವ ಅವಧಿಯವರೆಗೆ ತೆರೆಯದಂತೆ ಆದೇಶಿಸಲಾಗಿದೆ.

ಪರೀಕ್ಷೆಯಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಪರೀಕ್ಷಾ ಅವ್ಯವಹಾರಗಳನ್ನು ತಡೆಗಟ್ಟಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಸೂಕ್ತ ಪೊಲೀಸ್ ಸಿಬ್ಬಂದಿಗಳನ್ನು ನೇಮಿಸಲು ಕ್ರಮವಹಿಸಲಾಗಿದೆ.

***

ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಉಚಿತ

ವಿಜಯಪುರ: ಜುಲೈ 19 ಹಾಗೂ 22 ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಗಳಿಗೆ ತೆರಳುವವಿದ್ಯಾರ್ಥಿಗಳು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಹಾಗೂ ಹಿಂದಿರುಗುವಾಗ ಎಸ್.ಎಸ್.ಎಲ್.ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT