ವಿಜಯಪುರ: ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸಿಂದಗಿ ತಾಲ್ಲೂಕಿನ ವಿದ್ಯಾರ್ಥಿಗಳು ಶೇ 77.92ರಷ್ಟು ಉತ್ತೀರ್ಣರಾಗುವ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ವಿಜಯಪುರ ಗ್ರಾಮೀಣ ಶೇ 75.41, ಚಡಚಣ ಶೇ 74.76, ಇಂಡಿ ಶೇ72.77, ಮುದ್ದೇಬಿಹಾಳ ಶೇ 71.63, ವಿಜಯಪುರ ಗ್ರಾಮೀಣ ಶೇ64.76 ಹಾಗೂಬಸವನ ಬಾಗೇವಾಡಿ ತಾಲ್ಲೂಕಿನಶೇ 54.23ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಪ್ರಸನ್ನಕುಮಾರ್ ತಿಳಿಸಿದ್ದಾರೆ.

ಶೇ 100 ಫಲಿತಾಂಶ:ಜಿಲ್ಲೆಯ ಒಟ್ಟು 559 ಪ್ರೌಢಶಾಲೆಗಳ ಪೈಕಿ 9 ಸರ್ಕಾರಿ, 3 ಅನುದಾನಿತ ಮತ್ತು 14 ಅನುದಾನ ರಹಿತ ಪ್ರೌಢಶಾಲೆಗಳು ಸೇರಿದಂತೆ ಒಟ್ಟು 26 ಶಾಲೆಗಳು ಶೇ 100ರಷ್ಟು ಫಲಿತಾಂಶ ಪಡೆದುಕೊಂಡಿವೆ. ಅನುದಾನ ರಹಿತ 3 ಪ್ರೌಢಶಾಲೆಗಳು ಶೂನ್ಯ ಸಂಪಾದನೆ ಮಾಡಿವೆ ಎಂದು ಹೇಳಿದರು.

ಗ್ರಾಮೀಣರು ಮೇಲುಗೈ:ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ73.26ರಷ್ಟು ಉತ್ತೀರ್ಣರಾಗುವ ಮೂಲಕ ನಗರ ಪ್ರದೇಶದ (ಶೇ 64.46) ವಿದ್ಯಾರ್ಥಿಗಳನ್ನು ಹಿಂದಿಕ್ಕಿದ್ದಾರೆ ಎಂದರು.

ಅನುದಾನ ರಹಿತ ಶಾಲೆಗಳು ಮುಂದೆ:ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಗಳ ಶೇ 64.34 ವಿದ್ಯಾರ್ಥಿಗಳು, ಅನುದಾನಿತ ಪ್ರೌಢಶಾಲೆಗಳ ಶೇ 59.72 ವಿದ್ಯಾರ್ಥಿಗಳು ಹಾಗೂ ಅನುದಾನ ರಹಿತ ಪ್ರೌಢಶಾಲೆಗಳ ಶೇ76.36ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದರು.

ಮಾಧ್ಯಮವಾರು ಫಲಿತಾಂಶ:ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ಶೇ 68.09, ಆಂಗ್ಲ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ಶೇ 86.15, ಉರ್ದು ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ಶೇ 57.59 ಮತ್ತು ಮರಾಠ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ಶೇ 27.9ರಷ್ಟು ಉತ್ತೀರ್ಣರಾಗಿದ್ದಾರೆ ಎಂದರು.

ಬಾಲಕಿಯರು ಮುಂದೆ:ಜಿಲ್ಲೆಯಲ್ಲಿ ಪರೀಕ್ಷೆ ಬರೆದ 14,350 ಬಾಲಕಿಯರ ಪೈಕಿ 10,797 (ಶೇ75.24) ಹಾಗೂ 16,902 ಬಾಲಕರ ಪೈಕಿ 11,280(ಶೇ66.71) ಉತ್ತೀರ್ಣರಾಗಿದ್ದಾರೆ ಎಂದು ಹೇಳಿದರು.

ಶೇ 70.64 ರಷ್ಟು ಉತ್ತೀರ್ಣ:ಸೋಮವಾರ ಪ್ರಕಟವಾದ 2019–20ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಶೇ 70.64ರಷ್ಟು ಫಲಿತಾಂಶ ಲಭಿಸಿದೆ. ಪರೀಕ್ಷೆ ಬರೆದ 31,252 ವಿದ್ಯಾರ್ಥಿಗಳ ಪೈಕಿ 22,077 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟು 9175 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಜಿಲ್ಲೆಗೆ ‘ಬಿ’ ಗ್ರೇಡ್ ಲಭಿಸಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.