ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಂಗನವಾಡಿಯಲ್ಲಿ ಪೂರ್ವ ಪ್ರಾರ್ಥಮಿಕ ಶಿಕ್ಷಣ ಆರಂಭಿಸಿ’

Last Updated 3 ಡಿಸೆಂಬರ್ 2022, 12:57 IST
ಅಕ್ಷರ ಗಾತ್ರ

ವಿಜಯಪುರ: ಅಂಗನವಾಡಿ ಕೇಂದ್ರಗಳಲ್ಲಿಯೇ ಪೂರ್ವ ಪ್ರಾರ್ಥಮಿಕ ಶಿಕ್ಷಣ ಆರಂಭಿಸಲು ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರನ್ನಾಗಿ ಪರಿಗಣಿಸಲು ಒತ್ತಾಯಿಸಿಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು)ದಿಂದ ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಖೈನೂರ ಅವರಿಗೆ ಮನವಿ ಸಲ್ಲಿಸಿದರು.

ಅಂಗನವಾಡಿ ನೌಕರರ ಸಂಘದ ಇಂಡಿ ತಾಲ್ಲೂಕು ಅಧ್ಯಕ್ಷೆ ಭಾರತಿ ವಾಲಿ ಮಾತನಾಡಿ, ಗ್ರಾಚ್ಯುಟಿ ಪಾವತಿಸಲು ಕೂಡಲೇ ಸರ್ಕಾರ ನಿರ್ದೇಶನ ನೀಡಬೇಕು, ಗ್ರಾಚ್ಯುಟಿಗೆ ಸಲ್ಲಿಸಿರುವ ಅರ್ಜಿದಾರರಿಗೆ ಕೂಡಲೇ ಪರಿಹಾರ ನೀಡಲು ರಾಜ್ಯ ಸಚಿವ ಸಂಪುಟ ಆದೇಶಿಸಬೇಕು ಎಂದು ಒತ್ತಾಯಿಸಿದರು.

ಅನ್ನದೊಟ್ಟಿಗೆ ಅಕ್ಷರ ಕೇಂದ್ರವಾಗಿ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಿ ಬಲಿಷ್ಠ ಪಡಿಸಬೇಕು. ಐಸಿಡಿಎಸ್ ಮಾರ್ಗದರ್ಶಿ ಸೂಚಿಗಳ ಪ್ರಕಾರ ಇರುವ 6 ಸೇವೆಗಳಿಗೆ ಮಾತ್ರ ಅಂಗನವಾಡಿ ನೌಕರರನ್ನು ಬಳಸಬೇಕು ಎಂದು ಆಗ್ರಹಿಸಿದರು.

ಅಂಗನವಾಡಿ ಕೇಂದ್ರಗಳ ವೇಳಾಪಟ್ಟಿ ಬದಲಾಗಬೇಕು, ಬೆಳಿಗ್ಗೆ 10 ರಿಂದ ಮಧ್ಯಾಹ್ನ 1ರ ವರೆಗೆ ಪೂರ್ವಪಥಮಿಕ ಶಿಕ್ಷಣ ನೀಡಲು ಸಮಯ ನಿಗದಿ ಮಾಡಬೇಕು ಎಂದರು.

ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಭೀಮಶಿ ಕಲಾದಗಿ, ಸುರೇಖಾ ರಜಪೂತ, ಸುವರ್ಣಾ ಹಲಗಣಿ, ಶೈಲಾ ಕಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT