ಶನಿವಾರ, ಜನವರಿ 28, 2023
21 °C

ಜಿ.ಪಂ. ಸಿಇಒ ರಾಹುಲ್‌ಗೆ ರಾಜ್ಯ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ರಾಜ್ಯ ಮಟ್ಟದ ‘ಅತ್ಯುತ್ತಮ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ’ ಪ್ರಶಸ್ತಿಗೆ ವಿಜಯಪುರ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರನ್ನು ರಾಜ್ಯ ಚುನಾವಣಾ ಆಯೋಗವು ಆಯ್ಕೆ ಮಾಡಿದೆ.

ಜ. 25 ರಂದು ಬೆಂಗಳೂರಿನ ರಾಜ್ಯ ಭವನದಲ್ಲಿ ನಡೆಯುವ   13ನೇ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಶಿಂಧೆ ಅವರು ಜಿಲ್ಲೆಯಾದ್ಯಂತ ಮತದಾರರ ಜಾಗೃತಿ ಮೂಡಿಸುವ ಸಲುವಾಗಿ ಶಾಲಾ,ಕಾಲೇಜು  ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಯುವ ಮತದಾರರ ಹೊಸ ನೋಂದಣಿ ಪ್ರಕ್ರಿಯೆ ಯಶಸ್ವಿಗೊಳಿಸಿದ್ದಾರೆ.

ವಿಜಯಪುರ ನಗರದಲ್ಲಿ ಸುಮಾರು 2 ಸಾವಿರ ವಿದ್ಯಾರ್ಥಿಗಳೊಂದಿಗೆ ಕಾಲ್ನಡಿಗೆ ಜಾಥಾ  ಹಮ್ಮಿಕೊಂಡು ಯುವ ಮತದಾರರಲ್ಲಿ ಅರಿವು ಮೂಡಿಸಿದ್ದರು.

ಅಲ್ಲದೆ, ಮತದಾನದ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರಚಾರ ಸಾಮಗ್ರಿಗಳನ್ನು ವಿತರಿಸಿ, ಜಿಲ್ಲೆಯಲ್ಲಿ ಹೆಚ್ಚಿನ ಮತದಾನ ಆಗುವ ದಿಶೆಯಲ್ಲಿ ಅಗತ್ಯ ಕ್ರಮ ಕೈಕೊಂಡಿರುವುದನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು