ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ.ಕುಶಾಲ್‌ ದಾಸ್‌ಗೆ ರಾಜ್ಯ ಪ್ರಶಸ್ತಿ

Published 29 ನವೆಂಬರ್ 2023, 13:19 IST
Last Updated 29 ನವೆಂಬರ್ 2023, 13:19 IST
ಅಕ್ಷರ ಗಾತ್ರ

ವಿಜಯಪುರ: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಬಿ.ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಫಿಜಿಯಾಲಜಿ ವಿಭಾಗದ ಡಿಸ್ಟಿಂಗ್ವಿಶ್ಡ್‌ ಚೇರ್ ಪ್ರೊಫೆಸರ್ ಡಾ.ಕುಶಾಲ್‌ ಕೆ. ದಾಸ್ ಅವರನ್ನು ರಾಜ್ಯ ಸರ್ಕಾರವು ಅಂಗವಿಕಲರ ಕ್ಷೇತ್ರದಲ್ಲಿನ ಸೇವೆಗಾಗಿ ರಾಜ್ಯ ಮಟ್ಟದ ವೈಯಕ್ತಿಕ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಡಿ.3ರಂದು ವಿಶ್ವ ಅಂಗವಿಕಲರ ದಿನದಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ವವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಅಂಗವಿಕಲ ವ್ಯಕ್ತಿ/ಅಂಗವಿಕಲರ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸುತ್ತಿರುವುದನ್ನು ಗುರುತಿಸಿ ವೈಯಕ್ತಿಕ ವಿಭಾಗದಡಿ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ‌.

ಕುಶಾಲ್ ದಾಸ್ ಅವರಿಗೆ ಬಿ.ಎಲ್.ಡಿ.ಇ‌ ಸಂಸ್ಥೆಯ ಅಧ್ಯಕ್ಷರೂ ಆದ ಸಚಿವ ಎಂ.ಬಿ. ಪಾಟೀಲ ಅಭಿನಂದನೆ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT