ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಸವನಬಾಗೇವಾಡಿ: ಏ.9ರಂದು ರಾಜ್ಯಮಟ್ಟದ ಜಯಂತ್ಯುತ್ಸವ

Published 7 ಏಪ್ರಿಲ್ 2024, 14:18 IST
Last Updated 7 ಏಪ್ರಿಲ್ 2024, 14:18 IST
ಅಕ್ಷರ ಗಾತ್ರ

ಬಸವನಬಾಗೇವಾಡಿ: ಅಖಿಲ‌ ಕರ್ನಾಟಕ ವೀರಶೈವ ಲಿಂಗಾಯತ ಹಂಡೆವಜೀರ ಕ್ಷೇಮಾಭಿವೃದ್ಧಿ ಸಂಘ‌ವು ಕಲಬುರಗಿಯ ಚಾಲುಕ್ಯ ಅಧ್ಯಯನ ಪೀಠದ ಸಹಯೋಗದಲ್ಲಿ ರಾಜ್ಯಮಟ್ಟದ ಹಂಡೆ ಅರಸ ಹನುಮಪ್ಪನಾಯಕನ ಜಯಂತ್ಯುತ್ಸವವನ್ನು ಏ.9ರಂದು ಬೆಳಿಗ್ಗೆ 10 ಕ್ಕೆ ವಡವಡಗಿ ಗ್ರಾಮದ ನಂದಿಮಠದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹಂಡೆವಜೀರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಾ.ಎಸ್.ಎಸ್.ಪಾಟೀಲ ಹೇಳಿದರು.

ಪಟ್ಟಣದ ಸಿದ್ರಾಮೇಶ್ವರ ಪತ್ತಿನ ಸಹಕಾರಿ ಬ್ಯಾಂಕ್ ನಲ್ಲಿ ಭಾನುವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೀರಸಿದ್ದ ಸ್ವಾಮೀಜಿ, ಬೃಂಗೇಶ್ವರಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು, ಹಂಡವಜೀರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಾ. ಎಸ್.ಎಸ್.ಪಾಟೀಲ ಅಧ್ಯಕ್ಷತೆ ವಹಿಸುವರು ಎಂದರು.

ಚಾಲುಕ್ಯ ಸಂಸ್ಕೃತಿ ಅಧ್ಯಯನ ಪೀಠದ ಅಧ್ಯಕ್ಷ ಜಿ.ಎನ್. ಪಾಟೀಲ , ಸಂಶೋಧಕ ಡಾ.ಎಸ್. ಸಿ. ಪಾಟೀಲ, ಹಂಡೆವಜೀರ ಸಮಾಜದ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಬಿ. ಎಸ್. ಪಾಟೀಲ, ಸಂಘದ ಗೌರವಾಧ್ಯಕ್ಷ ಎಸ್.ಆರ್. ದೇಸಾಯಿಗೌಡ್ರು , ಸಂಶೋಧಕ ಎಂ. ಎಸ್. ಚೌಧರಿ ಉಪಸ್ಥಿತರಿರುವರು ಡಿ.ಎನ್.ಪಾಟೀಲ, ವೈ.ಎಸ್.ಗಂಗಶೆಟ್ಟಿ ಉಪನ್ಯಾಸ ನೀಡುವರು ಎಂದು ಹೇಳಿದರು.

ಪ್ರತಿ ವರ್ಷ ಏ.9 ರಂದು ಹನುಮಪ್ಪ ನಾಯಕರ ಜಯಂತಿಯನ್ನು ಸರ್ಕಾರದಿಂದ ಆಚರಿಸುವಂತಾಗಬೇಕು ಎಂದು ಹಿಂದಿನ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿತ್ತು. ಮುಂಬರುವ ದಿನಗಳಲ್ಲಿ ಈಗಿನ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಆರ್.ಎಸ್. ಪಾಟೀಲ, ಉಪಾಧ್ಯಕ್ಷ ಎಸ್.ಜಿ. ಪಾಟೀಲ, ಸಹ ಕಾರ್ಯದರ್ಶಿ ಪ್ರಭುಗೌಡ ಬೆಳ್ಳಿ, ತಾಲ್ಲೂಕು ಘಟಕದ ಅಧ್ಯಕ್ಷ ಸಿದ್ಧನಗೌಡ ಪಾಟೀಲ, ಹನಮಂತರಾಯಗೌಡ ಪಾಟೀಲ, ದೇವೇಂದ್ರ ಗೋನಾಳ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT