ವಿಜಯಪುರ: ಮಕ್ಕಳ ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಯೋಗದ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯೊಂದಿಗೆ ಜೂನ್ 21 ರಂದು ಜಿಲ್ಲೆಯಲ್ಲಿ ರಾಜ್ಯಮಟ್ಟದ ಯೋಗೋತ್ಸವ ಆಚರಿಸಲಾಗುವುದು ಎಂದು ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ರಾಜ್ಯಮಟ್ಟದ ಯೋಗೋತ್ಸವ ಕುರಿತು ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಯೋಗದಲ್ಲಿ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಸನ್ಮಾನ ಹಾಗೂ ಜೂ.22 ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಯೋಗದ ಕುರಿತು ಪರಿಣಿತರಿಂದ ಚಿಂತನಾಗೋಷ್ಠಿ ಹಾಗೂ ಯೋಗ ಪ್ರದರ್ಶನ ಹಮ್ಮಿಕೊಳ್ಳಲಾಗಿದ್ದು, ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅವರು ಹೇಳಿದರು.

ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿ, ಜೂ.21ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದೊಂದಿಗೆ ಜರುಗುವ ಯೋಗೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಪದವಿಪೂರ್ವ ಕಾಲೇಜು, ಪ್ರೌಢಶಾಲೆ, ವಿವಿಧ ವಸತಿ ನಿಲಯಗಳು ಸೇರಿದಂತೆ ವಿವಿಧ ಶಾಲಾ-ಕಾಲೇಜಿನ 2000 ವಿದ್ಯಾರ್ಥಿಗಳು ಭಾಗವಹಿಸಲು ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು. ಪೊಲೀಸ್ ಇಲಾಖೆಯಿಂದ ಸೂಕ್ತ ಭದ್ರತಾ ವ್ಯವಸ್ಥೆ, ಕ್ರೀಡಾಂಗಣದ ಸ್ವಚ್ಛತೆ, ಅಂಬುಲೆನ್ಸ್ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಯೋಗೋತ್ಸವ ಕಾರ್ಯಕ್ರಮದ ಅಂಗವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳಿಗೆ ಗುಣಮಟ್ಟದ ಟೀ ಶರ್ಟ್, ಕ್ಯಾಪ್ ಒದಗಿಸಬೇಕು. ಯೋಗದ ಮಹತ್ವ ಕುರಿತ ಕಿರುಪುಸ್ತಕವನ್ನು ಮಕ್ಕಳಿಗೆ ಒದಗಿಸುವುದು, ಕಾರ್ಯಕ್ರಮದ ವೇಳೆ ಮಳೆ ಬಂದಲ್ಲಿ ಒಳಾಂಗಣ ಕ್ರೀಡಾಂಗಣದಲ್ಲಿ ಪರ್ಯಾಯ ವ್ಯವಸ್ಥೆಯ ಸಿದ್ಧತೆ ಕೈಗೊಳ್ಳಬೇಕು. ಕ್ರೀಡಾಂಗಣದಲ್ಲಿ ಎಲ್ಇಡಿ ಪರದೆ ಅಳವಡಿಕೆ, ಕುಡಿಯುವ ನೀರು, ಅಲ್ಪೋಪಹಾರ, ಯೋಗ ಮ್ಯಾಟ್ ಸೇರಿದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಕೆ.ಹೊಸಮನಿ, ಆಯುಷ್ ಇಲಾಖೆಯ ಡಾ.ವಿದ್ಯಾವತಿ ಅಥಣಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಟಿ.ಎಸ್.ಕೊಲ್ಹಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ದೀಪಕ, ಕ್ರೀಡಾ ಇಲಾಖೆ ಅಧಿಕಾರಿ ರಾಜಶೇಖರ ಧೈವಾಡಿ ಉಪಸ್ಥಿತರಿದ್ದರು.

ರಾಜ್ಯಮಟ್ಟದ ಕಾರ್ಯಕ್ರಮವನ್ನು ಪ್ರಥಮವಾಗಿ ಜಿಲ್ಲೆಯಲ್ಲಿ ಆಯೋಜಿಸಲಾಗುತ್ತಿದೆ. ಈ ಕಾರ್ಯಕ್ರಮಕ್ಕಾಗಿ ₹ 15 ಲಕ್ಷ ಅಕಾಡೆಮಿಯಿಂದ ಒದಗಿಸಲಾಗಿದ್ದು ಯಶಸ್ವಿಯಾಗಿಸಬೇಕು.
–ಸಂಗಮೇಶ ಬಬಲೇಶ್ವರ, ಅಧ್ಯಕ್ಷ ಬಾಲವಿಕಾಸ ಅಕಾಡೆಮಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.