ಕ್ಷಯಮುಕ್ತ ವಿಜಯಪುರ ಜಿಲ್ಲೆಗೆ ಶ್ರಮಿಸಿ: ಗೋವಿಂದ ರೆಡ್ಡಿ

ವಿಜಯಪುರ: ದೇಶವನ್ನು 2025 ರೊಳಗೆ ‘ಕ್ಷಯಮುಕ್ತ ಭಾರತ’ ಮಾಡುವ ಗುರಿಯನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಜಿಲ್ಲೆಯಿಂದ 20 ಪಟ್ಟಣ,ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಜಿ.ಪಂ ಸಿಇಒ ಗೋವಿಂದ ರೆಡ್ಡಿ ಹೇಳಿದರು.
ನಗರದ ಜಿ.ಪಂ. ಸಭಾ ಭವನದಲ್ಲಿ ಬುಧವಾರ ನಡೆದ 20 ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಕಾರ್ಯದರ್ಶಿಗಳಿಗೆ ಆಯೋಜಿಸಲಾಗಿದ್ದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆಯ್ಕೆಯಾಗಿರುವ ಗ್ರಾಮ ಪಂಚಾಯ್ತಿಗಳಲ್ಲಿ ಕ್ಷಯರೋಗ ನಿರ್ಮೂಲನೆಗಾಗಿ ಹಲವು ಕಾರ್ಯಕ್ರಮ ಹಮ್ಮಿಕೊಳ್ಳುವ ನಿಮಿತ್ಯ ‘ಕ್ಷಯಮುಕ್ತ ಗ್ರಾಮ ಪಂಚಾಯಿತಿ’ ಎಂಬ ತರಬೇತಿ ಹಮ್ಮಿಕೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲರೂ ಕೂಡಿ ವಿಜಯಪುರ ಜಿಲ್ಲೆಯನ್ನು ಕ್ಷಯಮುಕ್ತವನ್ನಾಗಿ ಮಾಡುವಲ್ಲಿ ಶ್ರಮಿಸೋಣ ಎಂದರು.
ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ.ಈರಣ್ಣ ಎಸ್.ಧಾರವಾಡಕರ, ‘ಕ್ಷಯಮುಕ್ತ ಗ್ರಾಮ ಪಂಚಾಯ್ತಿ’ ವಿಷಯದ ಕುರಿತು ತರಬೇತಿ ನೀಡಿದರು.
ಆರೋಗ್ಯ ಇಲಾಖೆಯ ಕಾರ್ಯಕ್ರಮಾಧಿಕಾರಿ ಡಾ. ರಾಜೇಶ್ವರಿ ಗೋಲಗೇರಿ, ಡಾ. ಜೆಬುನ್ನಿಸಾಬೇಗಂ ಬೀಳಗಿ ಹಾಗೂ ಆರೋಗ್ಯ ಶಿಕ್ಷಣಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಮೇಲ್ವಿಚಾರಕರು ಮತ್ತು ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದ ಸಿಬ್ಬಂದಿ ಉಪಸ್ಥಿತರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.