ದಕ್ಷಿಣ ವಲಯ ಆರ್.ಡಿ ಪರೇಡಗೆ ಆಯ್ಕೆ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಎನ್.ಎಸ್.ಎಸ್ ಕೋಶದ ಮೂವರು ವಿದ್ಯಾರ್ಥಿ ನಿಯರು ಗಣ ರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಲು ದಕ್ಷಿಣ ವಲಯದ ಆರ್.ಡಿ. ತರಬೇತಿಗೆ ಆಯ್ಕೆಯಾಗಿದ್ದಾರೆ.
ನ.26 ರಿಂದ ಡಿ.6 ರವರೆಗೆ ತಿರುಚ ನಾಪಳ್ಳಿಯ ಕರುಮಂದಪಂ ನ್ಯಾಷನಲ್ ಕಾಲೇಜಿನಲ್ಲಿ ತರಬೇತಿ ನಡೆಯಲಿದೆ.
ಮಹಿಳಾ ವಿಶ್ವವಿದ್ಯಾಲಯದ ವ್ಯಾಪ್ತಿಯ ಧಾರವಾಡದ
ಕೆ.ಎಸ್.ಜಿಗಳೂರ ಮಹಿಳಾ ಮಹಾವಿದ್ಯಾಲಯದ ಅಪೂರ್ವಾ ಸಿ.ಎ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಮಹಾವಿದ್ಯಾಲಯ ಪೂರ್ಣಿಮಾ ಆಡೂರು, ಹುಬ್ಬಳ್ಳಿಯ ಎಸ್.ಜೆ.ಎಂ.ವಿ ಮಹಿಳಾ ಮಹಾವಿ
ದ್ಯಾಲಯದ ಪ್ರೇಕ್ಷಾ
ತಿಮ್ಮನಗೌಡರ ಆಯ್ಕೆಯಾಗಿದ್ದಾರೆ ಎಂದು ವಿವಿಯ ಎನ್.ಎಸ್.ಎಸ್ ಕೋಶದ ಕಾರ್ಯಕ್ರಮ ಸಂಯೋಜನಾಧಿಕಾರಿ ಪ್ರೊ.ನಾಮದೇವ ಗೌಡ ತಿಳಿಸಿದ್ದಾರೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.