ಸಿಂದಗಿ: ‘ದೇಶದ ಭವಿಷ್ಯ ಶಾಲಾ ಕೊಠಡಿಯಲ್ಲಿ ಅಡಗಿದೆ. ವಿದ್ಯಾರ್ಥಿಗಳು ಸತತ ಅಧ್ಯಯನಶೀಲತೆ ಗುಣ ಮತ್ತು ಸಚ್ಛಾರಿತ್ರ್ಯವಂತರಾಗಿ ದೇಶಕ್ಕೆ ಕೀರ್ತಿ ತರುವಂತಾಗಬೇಕು’ ಎಂದು ವಿಧಾನಸಭೆ ಸಭಾಪತಿ ಯು.ಟಿ.ಖಾದರ ಸಲಹೆ ನೀಡಿದರು.

ಇಲ್ಲಿಯ ಹೊರವಲಯ ಆಲಮೇಲ ರಸ್ತೆಯಲ್ಲಿನ ಪಿಇಎಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ವಿಧಾನಸಭೆ ಅಧಿವೇಶನ ವೀಕ್ಷಿಸಲು ಮುಕ್ತ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಆಹ್ವಾನಿಸಿದರು.

2024–25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ತಾಲ್ಲೂಕಿಗೆ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿನಿ ಸ್ವಾತಿ ಬಿರಾದಾರ, ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ರತ್ನಾಬಾಯಿ ಕಲ್ಲೂರ, ಗೌರವಬಾಯಿ ಸುಣಗಾರ, ಚೇತನ ಬಿರಾದಾರ, ಭಾವನಾ ಕಡಣಿ, ವೀರೇಶ ಕುಳೇಕುಮಟಗಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಭಾಪತಿಗಳು ಗೌರವಿಸಿದರು.

ಸಂಸ್ಥೆಯ ಗೌರವ ಕಾರ್ಯದರ್ಶಿ ಬಿ.ಪಿ.ಕರ್ಜಗಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ಪ್ರೊ.ಐ.ಬಿ.ಬಿರಾದಾರ, ಕೆ.ಎಚ್.ಸೋಮಾಪೂರ, ಪ್ರಾಚಾರ್ಯರಾದ ಆರ್.ಬಿ.ಗೋಡಕರ, ಜಿ.ಎಸ್.ಕಡಣಿ ಹಾಗೂ ಕಾಂಗ್ರೆಸ್ ಧುರೀಣ ಮೈಬೂಬ ತಾಂಬೋಳಿ (ಎಂಆರ್ಟಿ) ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.