ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎಸ್ ಯುಸಿಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ನಾಗಜ್ಯೋತಿ ನಾಮಪತ್ರ ಸಲ್ಲಿಕೆ

Published 12 ಏಪ್ರಿಲ್ 2024, 14:01 IST
Last Updated 12 ಏಪ್ರಿಲ್ 2024, 14:01 IST
ಅಕ್ಷರ ಗಾತ್ರ

ವಿಜಯಪುರ: ಎಸ್ ಯುಸಿಐ ಕಮ್ಯುನಿಸ್ಟ್ ಪಕ್ಷದ ಲೋಕಸಭಾ ಅಭ್ಯರ್ಥಿ ನಾಗಜ್ಯೋತಿ. ಬಿ. ಎನ್ ಶುಕ್ರವಾರ ನಾಮಪತ್ರ ಸಲ್ಲಿಸಿದರು.

ನಾಗಜ್ಯೋತಿ ಮಾತನಾಡಿ, ಜನರ ಕೆಂಗಣ್ಣಿಗೆ ಗುರಿಯಾಗುವ ಬಂಡವಾಳಶಾಹಿ ಪಕ್ಷಗಳು ಹೊಸ ಮುಖಗಳೊಂದಿಗೆ, ಹೊಸ ಗ್ಯಾರಂಟಿಗಳೊಂದಿಗೆ ಮತ್ತೆ ಜನರ ಬಳಿಗೆ ಬರುತ್ತಿವೆ. ಇನ್ನೊಂದೆಡೆ ಕೇಂದ್ರದಲ್ಲಿ ಕಳೆದ 10 ವರ್ಷಗಳಿಂದ ಅಧಿಕಾರದಲ್ಲಿರುವ ಪಕ್ಷ ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುವ ಭರವಸೆ ಸುಳ್ಳಾಗಿದೆ. ಇಂದು ಭಾರತದ ಯುವಕರು ನಿರುದ್ಯೋಗದ ಕಷ್ಟ ತಡೆಯಲಾಗದೆ ಯುದ್ಧ ಪೀಡಿತ ರಷ್ಯಾ, ಇಸ್ರೇಲ್, ಮೊದಲಾದ ರಾಷ್ಟ್ರಗಳಿಗೆ ಕೆಲಸ ಹುಡುಕಿಕೊಂಡು ಹೋಗುತ್ತಿದ್ದಾರೆ. ಇನ್ನೊಂದೆಡೆ ಜಾಗತಿಕ ಹಸಿವಿನ ಸೂಚ್ಯಂಕ, ಮಾನವ ಅಭಿವೃದ್ಧಿ ಸೂಚ್ಯಂಕಗಳಲ್ಲಿ ಭಾರತದ ಸ್ಥಾನ ಪಾತಾಳದಲ್ಲಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಭೀಕರ ಬರ ಬಂದಿದ್ದು, ನೀರಿಗಾಗಿ ಹಾಹಾಕಾರ ಇದ್ದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಕ್ಷುಲ್ಲಕ ರಾಜಕೀಯದಲ್ಲಿ ಮುಳುಗಿವೆಯೇ ಹೊರತು, ಜನರ ಸಂಕಷ್ಟಗಳಿಗೆ ಗಮನ ಹಾಕುತ್ತಿಲ್ಲ. ಇಲ್ಲಿ ಜನಸಮುದಾಯ ಹಾಗೂ ರೈತ - ಕೃಷಿ- ಕಾರ್ಮಿಕರಿಗೆ ಅವಶ್ಯಕತೆ ಇರುವುದು ಉದ್ಯೋಗ, ಶಿಕ್ಷಣ, ವಸತಿಗಳಂತಹ ಸೌಲಭ್ಯಗಳು. ಇಂತಹ ಜನರ ಜ್ವಲಂತ ಸಮಸ್ಯೆಗಳ ವಿರುದ್ಧ ಲೋಕಸಭೆಯಲ್ಲಿ ಧ್ವನಿ ಎತ್ತಲು ಬೆಂಬಲಿಸುವಂತೆ ಮನವಿ ಮಾಡಿದರು.

ನಾಮಪತ್ರ ಸಲ್ಲಿಸುವಾಗ ಜಿಲ್ಲಾ ಕಾರ್ಯದರ್ಶಿ ಬಿ. ಭಗವಾನರೆಡ್ಡಿ , ಮುಖಂಡರಾದ ವಿ. ಎ. ಪಾಟೀಲ, ಸಂಗಾರೆಡ್ಡಿ ದೇಸಾಯಿ, ಪಕ್ಷದ ಜಿಲ್ಲಾ ಸಮಿತಿಯ ಸದಸ್ಯರಾದ ಸಿದ್ದಲಿಂಗ ಬಾಗೇವಾಡಿ ಇದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT