ಸೋಮವಾರ, ಡಿಸೆಂಬರ್ 5, 2022
19 °C

ಗೋಳಗುಮ್ಮಟದ ಮೇಲಿನಿಂದ ಜಿಗಿದು ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ನಗರದ ಗೋಳಗುಮ್ಮಟ ವೀಕ್ಷಣೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.

ನಗರದ  ಅಲ್‌ ಅಮಿನ್‌ ವೈದ್ಯಕೀಯ ಕಾಲೇಜಿನಲ್ಲಿ ಅಟೆಂಡರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಲೀಂ  ಹೊನವಾಡ(54) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. 

ಬುಧವಾರ ಸುಮಾರು ಬೆಳಿಗ್ಗೆ 11 ಗಂಟೆ ವೇಳೆಗೆ ಗೋಳಗುಮ್ಮಟ ವೀಕ್ಷಣೆಗೆ ಬಂದಿದ್ದ ಸಲೀಂ ಗೋಳಗುಮ್ಮಟದ ಮೇಲಿನಿಂದ ಏಕಾಏಕಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. 

ಈ ಸಂದರ್ಭದಲ್ಲಿ ಗೋಳಗುಮ್ಮಟದ ವೀಕ್ಷಣೆಗೆ ಬಹಳಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಬಂದಿದ್ದರು. ಅವರ ಸಮ್ಮುಖದಲ್ಲೇ ಈ ಘಟನೆ ನಡೆದಿದ್ದು, ಪ್ರವಾಸಿಗರು ಬೆಚ್ಚಿ ಬಿದ್ದರು. 

ಸ್ಥಳಕ್ಕೆ ಗೋಳಗುಮ್ಮಟ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ದೂರು ದಾಖಲಿಸಿಕೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು