ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಕಿಹಾಳ ಗ್ರಾ.ಪಂ: ಸುಮಿತ್ರಾ ಅಧ್ಯಕ್ಷೆ

Last Updated 15 ಜೂನ್ 2022, 3:47 IST
ಅಕ್ಷರ ಗಾತ್ರ

ತಾಳಿಕೋಟೆ: ತಾಲ್ಲೂಕಿನ ಮೂಕಿಹಾಳ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆಯಾಗಿ ಬಿಜೆಪಿ ಬೆಂಬಲಿತ ಸುಮಿತ್ರಾ ರಾಜಕುಮಾರ ತಳವಾರ ಅವಿರೋಧವಾಗಿ ಮಂಗಳವಾರ ಆಯ್ಕೆಯಾದರು.

ಮೂಕಿಹಾಳ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ಚುನಾವಣೆ ನಡೆಯಿತು. ಚುನಾವಣಾಧಿಕಾರಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್.ಬಿರಾದಾರ ಆಯ್ಕೆಯನ್ನು ಘೋಷಣೆ ಮಾಡಿದರು.

ಈ ಹಿಂದೆ ಆಧ್ಯಕ್ಷೆಯಾಗಿದ್ದ ಶಾಂತಮ್ಮ ಸುಧಾಕರ ರಾಜೀನಾಮೆಯಿಂದಾಗಿ ಅಧ್ಯಕ್ಷ ಸ್ಥಾನ ಖಾಲಿಯಾಗಿತ್ತು. 20 ಸದಸ್ಯ ಬಲದಲ್ಲಿ 16 ಸದಸ್ಯರು ಚುನಾವಣೆ ಪ್ರಕ್ರಿಯೆಲ್ಲಿ ಭಾಗವಹಿಸಿದ್ದರು. ಚುನಾವಣಾ ಸಹಾಯಕರಾಗಿ ತಾಲ್ಲೂಕು ಪಂಚಾಯತಿ ಸಿಬ್ಬಂದಿ ಬಸನಗೌಡ ಚೌದ್ರಿ, ಪಿಡಿಒ ಎಸ್.ವೈ.ತಳವಾರ ಕಾರ್ಯನಿರ್ವಹಿಸಿದರು.

ವಿಜಯೋತ್ಸವ: ಅಧ್ಯಕ್ಷೆಯಾಗಿ ಸುಮಿತ್ರಾ ರಾಜಕುಮಾರ ತಳವಾರ ಆಯ್ಕೆಯಾಗುತ್ತಿದ್ದಂತೆ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ನಿಂಗಪ್ಪಗೌಡ ಬಪ್ಪರಗಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT