ಮಂಗಳವಾರ, ಜೂನ್ 22, 2021
24 °C

ಪೂರೈಕೆಯಾಗದ ರೆಮ್‌ಡಿಸಿವಿರ್‌: ಎಂ.ಬಿ.ಪಾಟೀಲ ಅಸಮಾಧಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ:  ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ದಾಖಲಾಗಿರುವ ಕೋವಿಡ್‌ ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ಅಗತ್ಯವಿರುವಷ್ಟು  ರೆಮ್‌ಡಿಸಿವಿರ್‌ ಸರ್ಕಾರದಿಂದ ಪೂರೈಕೆಯಾಗದೇ ಇದರಿಂದ ಚಿಕಿತ್ಸೆ ನೀಡುವುದು ಕಷ್ಟವಾಗಿದೆ ಎಂದು ಸಂಸ್ಥೆ ಅಧ್ಯಕ್ಷರೂ ಆದ ಶಾಸಕ ಎಂ.ಬಿ.ಪಾಟೀಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಆಸ್ಪತ್ರೆಯಲ್ಲಿ 300 ಆಕ್ಸಿಜನ್ ಬೆಡ್‌ಗಳು ಸೇರಿದಂತೆ ಒಟ್ಟು 500 ಬೆಡ್‌ಗಳನನ್ನು ಕೋವಿಡ್‌  ರೋಗಿಗಳ ಚಿಕಿತ್ಸೆ ನೀಡಲಾಗಿದೆ. ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ ಕಡಿಮೆ ದರದಲ್ಲಿ ಚಿಕಿತ್ಸೆ ನೀಡುತ್ತಿದ್ದೇವೆ. ಆದರೆ, ಸರ್ಕಾರ ಆಸ್ಪತ್ರೆಗೆ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಶೀಘ್ರದಲ್ಲೇ ಕೊರೊನಾ ರೋಗಿಗಳಿಗೆ ಬೆಡ್ ಸಂಖ್ಯೆಯನ್ನು 700 ಕ್ಕೆ ಹೆಚ್ಚಿಸಲು ಉದ್ದೇಶಿಸಿದ್ದೇವೆ. ಆದರೆ, ನಮಗೆ ಸಾಕಷ್ಟು ಪ್ರಮಾಣದಲ್ಲಿ ರೆಮಿಡಿಸಿವಿರ್ ಪೂರೈಕೆಯಾಗುತ್ತಿಲ್ಲ.  ಸಾಕಷ್ಟು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಹೇಳಿದ್ದಾರೆ.

ಸರ್ಕಾರ ಈ ನಿಟ್ಟಿನಲ್ಲಿ ರಾಜಕೀಯ ಬಿಟ್ಟು, ಮಾನವೀಯತೆಯ ದೃಷ್ಠಿಯಿಂದ ಗಮನ ಹರಿಸಬೇಕು. ಮುಂದೆ ಅನಾಹುತವಾಗುವುದನ್ನು ತಪ್ಪಿಸಲು ಸರಕಾರ ನೆರವಿಗೆ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು