ಮಂಗಳವಾರ, ಆಗಸ್ಟ್ 3, 2021
28 °C
ಬೃಹತ್‌ ಎಲ್‌ಇಡಿ ಪರದೆ ಮೇಲೆ ಆನ್‌ಲೈನ್‌ ನೇರ ಪ್ರಸಾರ; ಕಾಂಗ್ರೆಸ್‌ನಲ್ಲಿ ಹೊಸ ಹುರುಪು

ವಿಜಯಪುರ | ಡಿಕೆಶಿ ಪದಗ್ರಹಣ: ಕಾರ್ಯಕರ್ತರಿಂದ ಪ್ರತಿಜ್ಞಾ ದಿನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಕಾಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ ಮತ್ತು ಸಲೀಂ ಅಮ್ಮದ್‌ ಅವರ ಪದಗ್ರಹಣ ಕಾರ್ಯಕ್ರಮದ ಆನ್‌ಲೈನ್‌  ನೇರ ಪ್ರಸಾರವನ್ನು ನಗರದ ಜಿಲ್ಲಾ ಕಾಂಗ್ರೆಸ್‌ ಕಾರ್ಯಾಲಯದಲ್ಲಿ ಗುರುವಾರ ಮುಖಂಡರು, ಕಾರ್ಯಕರ್ತರು ವೀಕ್ಷಿಸಿದರು.

‘ವಂದೇ ಮಾತರಂ’ ಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪ್ರೊ.ರಾಜು ಆಲಗೂರ ಸಂವಿಧಾನ ಪೀಠಿಕೆಯ ಪ್ರತಿಜ್ಞಾ ವಿಧಿ ಬೋಧಿಸಿದರು.

‘ಸಮಾಜದಲ್ಲಿ ಸೌಹಾರ್ದತೆ ಮೂಡಿಸಲು, ಪಕ್ಷದ ತತ್ವ ಸಿದ್ದಾಂತ, ಜಾತ್ಯತೀತ ನಿಲುವು ಮತ್ತು ಸಾಮಾಜಿಕ ನ್ಯಾಯ ಜಾರಿಗೆ ತರಲು ಸತತವಾಗಿ ಶ್ರಮಿಸುತ್ತೇವೆ ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ನಮ್ಮ ದೇಶದ ಸಂವಿಧಾನಕ್ಕೆ ಸದಾ ಬದ್ದರಾಗಿರುತ್ತೇವೆ’ ಎಂದು ಸಭೆಯಲ್ಲಿದ್ದ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಸಾಮೂಹಿಕವಾಗಿ ಪ್ರತಿಜ್ಞೆ ಸ್ವೀಕರಿಸಿದರು.

ಕಾಂಗ್ರೆಸ್‌ ಕಾರ್ಯಕರ್ತರು ಹೊಸ ಹುರುಪಿನಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ನಗರದ 35 ವಾರ್ಡ್‌ಗಳಲ್ಲಿ ಹಾಗೂ ಜಿಲ್ಲೆಯ 275 ಸ್ಥಳಗಳಲ್ಲಿ ನೇರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಸುಮಾರು 50ರಿಂದ 100 ಜನ ಮುಖಂಡರು, ಕಾರ್ಯಕರ್ತರು ಕಾರ್ಯಕ್ರಮ ವೀಕ್ಷಿಸಿದರು ಎಂದು ಪ್ರೊ. ರಾಜು ಅಲಗೂರ ತಿಳಿಸಿದರು.

ಮಾಜಿ ಶಾಸಕರಾದ ಶರಣಪ್ಪ ಸುಣಗಾರ, ವಿಠ್ಠಲ ಕಟಕದೊಂಡ, ಮುಖಂಡರಾದ ಅಬ್ದುಲ್‌ ಹಮೀದ್‌ ಮುಶ್ರೀಪ್‌, ಮಹಿಳಾ ಘಟಕದ ಅಧ್ಯಕ್ಷೆ ವಿದ್ಯಾರಾಣಿ ತುಂಗಳ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಾಕೀರ ಸನದಿ, ರಾಜಶೇಖರ ಮೆಣಸಿನಕಾಯಿ, ಶರಣಪ್ಪ ಮತ್ತಿಕಟ್ಟಿ, ಮುದಕಪ್ಪ ಶಾಂತಗೇರಿ, ಚಂದ್ರಶೇಖರ ರಾಠೋಡ, ಸುನೀತಾ ಐಹೊಳೆ, ವೈಜನಾಥ ಕರ್ಪೂರಮಠ, ಚಾಂದಸಾಬ ಗಡಗಲಾವ, ವಿಶ್ವನಾಥ ಮಠ, ಮಹ್ಮದ್‌ರಫೀಕ್‌ ಟಪಾಲ, ನಗರ ಬ್ಲಾಕ್‌ ಅಧ್ಯಕ್ಷ ಜಮೀರ್‌ಅಹ್ಮದ್‌ ಬಕ್ಷಿ, ಚಂದ್ರಕಾಂತ ಶೆಟ್ಟಿ, ಪೀರಪ್ಪ ನಡುವಿನಮನಿ, ಗಂಗಾಧರ ಸಂಬಣ್ಣಿ, ಅಬ್ದುಲ್‌ಖಾದರ್‌ ಖಾದಿಂ, ಸಾಹೇಬಗೌಡ ಬಿರಾದಾರ, ಇರ್ಫಾನ್‌ ಶೇಖ್‌, ಸಂತೋಷ ಪಾಟೀಲ, ಸುರೇಶ ಘೋಣಸಗಿ, ವಿಜಯಕುಮಾರ ಘಾಟಗೆ, ವಸಂತ ಹೊನಮೊಡೆ, ವಿದ್ಯಾವತಿ ಅಂಕಲಗಿ, ಅಡಿವೆಪ್ಪ ಸಾಲಗಲ್ಲ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು