ವಿಜಯಪುರ:‘ಜಿಲ್ಲೆಯಲ್ಲಿ ಮಾನವ ದಿನಗಳನ್ನು ಸೃಷ್ಟಿಸಲು, ಬರ ನಿರ್ವಹಿಸಲು ಮೇವು ಹಾಗೂ ನೀರಿನ ಕೊರತೆ ನೀಗಿಸಲು ಆದ್ಯತೆ ನೀಡಿ’ ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ನೀಲಮ್ಮ ಮೇಟಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯ್ತಿಯ 11ನೇ ಸಾಮಾನ್ಯ ಸಭೆಯಲ್ಲಿ ಶುಕ್ರವಾರ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಬಹು ಮುಖ್ಯವಾಗಿ ಉದ್ಯೋಗ ಸೃಷ್ಟಿಸುವ ಅವಶ್ಯಕತೆಯಿದೆ. ನರೇಗಾ ಸೇರಿದಂತೆ ಸಾಧ್ಯವಿರುವ ವಿವಿಧ ಯೋಜನೆಗಳಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಗೆ ಕ್ರಮ ಕೈಗೊಳ್ಳಿ’ ಎಂದು ಆದೇಶಿಸಿದರು.

ಜಿಲ್ಲೆಯಲ್ಲಿ ಬರಗಾಲವಿರುವುದರಿಂದ ಕುಡಿಯುವ ನೀರು ಸೇರಿದಂತೆ, ದನ–ಕರುಗಳಿಗೆ ನೀರು ಹಾಗೂ ಮೇವಿನ ಕೊರತೆಯಾಗದಂತೆ, ಅಗತ್ಯವಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಹಾಗೂ ಮೇವು ಬ್ಯಾಂಕ್ ಸ್ಥಾಪನೆ ಮೂಲಕ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಸಲು ಸಾಧ್ಯವಿರುವೆಡೆ, ಅಂಥ ಬೋರ್ವೆಲ್ ಮಾಲೀಕರೊಂದಿಗೆ ಮಾತನಾಡಿ. ಪ್ರತಿ ತಿಂಗಳಿಗೆ ನೀರಿನ ಇಳುವರಿ ಆಧರಿಸಿ, ಬಳಸುವ ಪ್ರಮಾಣ ನಿರ್ಧರಿಸಿ ₹ 18000ದಿಂದ ₹ 20000 ಬಾಡಿಗೆ ಕೊಡಲು ಅವಕಾಶವಿದೆ. ಈ ನಿಟ್ಟಿನಲ್ಲಿ ಕಾರ್ಯಾಚರಿಸಿ’ ಎಂದು ಸಿಇಒ ವಿಕಾಸ್ ಕಿಶೋರ್ ಸುರಳಕರ್ ಪಂಚಾಯತ್ ರಾಜ್ ಹಾಗೂ ಗ್ರಾಮೀಣ ನೀರು ಸರಬರಾಜು ವಿಭಾಗ ಮತ್ತು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.

‘ಜಿಲ್ಲೆಯ 13 ಸ್ಥಳದಲ್ಲಿ ಮೇವು ಬ್ಯಾಂಕ್ ಸ್ಥಾಪನೆಗೆ ನಿರ್ಧರಿಸಲಾಗಿದೆ. ಜನವರಿಯಲ್ಲಿ ಐದು, ಫೆಬ್ರುವರಿಯಲ್ಲಿ ಒಂಬತ್ತು ಬ್ಯಾಂಕ್ ಆರಂಭಿಸಲಾಗುವುದು. ಈಗಾಗಲೇ ಮೇವು ಸಾಗಾಟಕ್ಕೆ ನಿಷೇಧವಿದೆ’ ಎಂದು ಪಶು ಸಂಗೋಪನಾ ಇಲಾಖೆಯ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.

ಅಧಿಕಾರಿಯ ಮಾಹಿತಿಗೆ ಬಿ.ಆರ್.ಎಂಟಮಾನ ಸೇರಿದಂತೆ ಇನ್ನಿತರೆ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ನಿಮ್ಮ ಇಲಾಖೆಯಿಂದ ತೆಗೆದುಕೊಂಡ ಕ್ರಮಗಳ ಬಗ್ಗೆಯಷ್ಟೇ ಮಾಹಿತಿ ನೀಡಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಸಮುದಾಯ ಕೃಷಿ ಹೊಂಡ, ಬೆಳೆ ರಕ್ಷಣೆ ಸೇರಿದಂತೆ ರೈತರಿಗೆ ಅಗತ್ಯವಿರುವ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿ ನೀಡುವ ಉದ್ಯೋಗವಾಹಿನಿ ವಾಹನ ಶನಿವಾರದಿಂದ ಪ್ರತಿ ಗ್ರಾಮಗಳಲ್ಲಿ ಸಂಚಾರ ಆರಂಭಿಸಲಿದೆ’ ಎಂದು ಸಿಇಒ ಸಭೆಗೆ ತಿಳಿಸಿದರು.

‘ವಿವಿಧ ವಸತಿ ಯೋಜನೆಯಡಿ ನೈಜ ಫಲಾನುಭವಿಗಳ ಆಯ್ಕೆಯಲ್ಲಿ ಸರ್ಕಾರ ನಿಗದಿಪಡಿಸಿದ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಗ್ರಾಮ ಸಭೆಯಿಂದ ಅನುಮೋದನೆಗೊಂಡ ಫಲಾನುಭವಿಗಳ ಪಟ್ಟಿಯ ಪ್ರಸ್ತಾವನೆಗಳನ್ನು ವಿಡಿಯೋ ಸಿ.ಡಿ.ಗಳ ಮೂಲಕ ರೆಕಾರ್ಡ್ ಮಾಡಿ ಗ್ರಾಮ ಪಂಚಾಯ್ತಿವಾರು ಮಾಹಿತಿ ನೀಡಬೇಕು. ಪ್ರಭಾವಿಗಳ ಒತ್ತಡಕ್ಕೆ ಮಣಿಯದೆ ಸರ್ಕಾರಿ ಆದೇಶ ಹಾಗೂ ಮಾನದಂಡಗಳ ಪ್ರಕಾರ ಮನೆಗಳನ್ನು ಹಂಚಿಕೆ ಮಾಡಲು ಸಂಬಂಧಿಸಿದ ತಾಲ್ಲೂಕು ಇಒಗಳು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಸಿಇಒ ಸೂಚನೆ ನೀಡಿದರು.

ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಮುಖ್ಯ ಯೋಜನಾಧಿಕಾರಿ ಸಿ.ವಿ.ಕುಂಬಾರ, ಜಿಲ್ಲಾ ಪಂಚಾಯ್ತಿ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.