ಮಂಗಳವಾರ, ಮೇ 18, 2021
30 °C

‘ನಿಯಮ ಪಾಲಿಸಿ, ಲಸಿಕೆ ತೆಗೆದುಕೊಳ್ಳಿ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಜಿಲ್ಲೆಯಲ್ಲಿ ಕೊರೊನಾ ಉಲ್ಭಣಿಸುತ್ತಿರುವುದರಿಂದ ಸರ್ಕಾರದ ನಿಯಮಗಳನ್ನು ತಪ್ಪದೆ ಪಾಲಿಸಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್. ಎಸ್‌. ಪಾಟೀಲ ಕುಚಬಾಳ ಮನವಿ ಮಾಡಿದ್ದಾರೆ.

ಮನೆಯಿಂದ ಹೊರಬರುವಾಗ ಮುಖಕ್ಕೆ ಮಾಸ್ಕ್ ಧರಿಸಿ, ಆಗಾಗ ಸೆನಿಟೈಜ್‌ನಿಂದ ಕೈತೊಳೆದುಕೊಳ್ಳಿ. ಇದರಿಂದ ಕೋವಿಡ್ ನಿಯಂತ್ರಣ ಸಾಧ್ಯ ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ದಿನೆ ದಿನೆ ಏರುತ್ತಿದೆ. ಇದಕ್ಕೆ ನಿಯಮ ಉಲ್ಲಂಘನೆಯೆ ಪ್ರಮುಖ ಕಾರಣ. ಜನ ನಿಯಮ ಪಾಲಿಸಿದರೆ ಇನ್ನೊಬ್ಬರಿಗೆ ಹರಡುವುದನ್ನು ತಪ್ಪಿಸಿಬಹುದು. ಆಸ್ಪತ್ರೆಗಳಲ್ಲಿ ಕೊರತೆಗಳ ಆಗರವೆ ಇದೆ. ಇದಕ್ಕೆ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವುದೆ ಕಾರಣ. ಇದನ್ನು ಅರಿತಾದರೂ ಜನರು ಸರ್ಕಾರ ಜಾರಿಗೊಳಿಸಿದ ನಿಯಮಗಳನ್ನು ತಪ್ಪದೆ ಪಾಲಿಸಲು ಮನವಿ ಮಾಡಿದ್ದಾರೆ.

ಜನ ಲಸಿಕೆ ಹಾಕಿಸಿ ಕೊಳ್ಳಬೇಕು. ಅದರ ಅಗತ್ಯತೆ ಇಲ್ಲ ಎಂದು ಅನಾಸಕ್ತಿ ತೋರಿಸುತ್ತಿರುವುದು ಸರಿ ಅಲ್ಲ. ಸರ್ಕಾರ ಬಡವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ ಪೂರೈಸುತ್ತಿದೆ. ಇದರ ಲಾಭ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು