ತಾಳಿಕೋಟೆ: ಪಟ್ಟಣದ ಬಳಿಯ ಡೋಣಿ ನದಿ ಹಾಗೂ ಮೂಕಿಹಾಳ ಗ್ರಾಮದ ಹತ್ತಿರ ಸೋಗಲಿ ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಸೇತುವೆಗಳ ಪ್ರಗತಿ ಹಂತದ ಕಾಮಗಾರಿಯನ್ನು ಶಾಸಕ ಸಿ.ಎಸ್.ನಾಡಗೌಡ ಮಂಗಳವಾರ ಪರಿಶೀಲಿಸಿದರು.

ಕಾಮಗಾರಿ ನಡೆಯುತ್ತಿರುವ ಎರಡೂ ಸೇತುವೆಗಳ ಸ್ಥಳಗಳಿಗೆ ಭೇಟಿ ನೀಡಿದ ಶಾಸಕರು, ಕಾಮಗಾರಿಗೆ ಬಳಸುತ್ತಿರುವ ಮರಳನ್ನು ಸ್ವತಃ ಪರಿಶೀಲಿಸಿದರು. ಯಾವ ಕಾರಣಕ್ಕೂ ಕಾಮಗಾರಿಯ ಗುಣಮಟ್ಟ ಕೆಡದಂತೆ ನೋಡಿಕೊಳ್ಳಬೇಕೆಂದು ಸ್ಥಳದಲ್ಲಿದ್ದ ಲೋಕೋಪಯೋಗಿ ಇಲಾಖೆಯ ಎಇಇ ಎ.ಬಿ.ರೆಡ್ಡಿ ಅವರಿಗೆ ಸೂಚಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೋಣಿ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಮುಖ್ಯ ಸೇತುವೆ ಅಂದಾಜು ಏ30 ಕೋಟಿಯದ್ದಾಗಿದೆ. ಇದು ಪೂರ್ಣಗೊಳ್ಳಲು ಇನ್ನಷ್ಟು ಸಮಯಾವಕಾಶದ ಅಗತ್ಯವಿದೆ. ಆದ್ದರಿಂದ ತಾಳಿಕೋಟೆಯಿಂದ ಹಡಗಿನಾಳ ಮಾರ್ಗದ ಸೋಗಲಿ ಹಳ್ಳದ ಹತ್ತಿರ ನಿರ್ಮಾಣಗೊಳ್ಳುತ್ತಿರುವ ಕೆಳ ಸೇತುವೆ ಮೇ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದೇನೆ.

ಈ ಸೇತುವೆ ಪೂರ್ಣಗೊಂಡರೆ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗುವುದಿಲ್ಲ. ಆದಷ್ಟು ಬೇಗ ಪೂರ್ಣಗೊಳಿಸಲು ಪ್ರಯತ್ನಿಸಲಾಗುವುದು. ಈ ಎರಡು ಸೇತುವೆಗಳ ಜೊತೆಗೆ ಹಿರೂರದಿಂದ ಗುತ್ತಿಹಾಳ ಗ್ರಾಮಕ್ಕೆ ಸಂಪರ್ಕ ನೀಡುವ ಸುಮಾರು ₹30 ಕೋಟಿಗಿಂತಲೂ ಹೆಚ್ಚು ಮೊತ್ತದ ಇನ್ನೊಂದು ಸೇತುವೆ ಕಾಮಗಾರಿಗೆ ಶೀಘ್ರದಲ್ಲಿಯೇ ಚಾಲನೆ ನೀಡಲಿದ್ದೇನೆ. ಈ ಸೇತುವೆ ನಿರ್ಮಾಣದಿಂದ ಈ ಭಾಗದ ಗ್ರಾಮೀಣ ಜನರಿಗೆ ತುಂಬಾ ಅನುಕೂಲವಾಗಲಿದೆ ಎಂದ ಅವರು ಮತಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನವನ್ನು ತಂದು ಕೆಲಸ ಮಾಡುತ್ತಿದ್ದೇನೆ ಎಂದರು.

ಮುಖಂಡರಾದ ಸಿದ್ದನಗೌಡ ಪಾಟೀಲ ನಾವದಗಿ, ಪ್ರಭುಗೌಡ ಮದರಕಲ್ಲ, ಸುರೇಶ ನಾಡಗೌಡ ಬಿಂಜಲಭಾವಿ, ಶರಣು ದೇಶಮುಖ, ರಾಜುಗೌಡ ಮುದ್ದೇಬಿಹಾಳ, ಮಲ್ಲಿಕಾರ್ಜುನ ಪಟ್ಟಣಶೆಟ್ಟಿ, ಸಂಗನಗೌಡ ಅಸ್ಕಿ, ಆರಿಫ್ ಹೊನ್ನುಟಗಿ, ಫಯಾಜ್ ಉತ್ನಾಳ, ಆಸೀಫ ಕೆಂಭಾವಿ, ಶರಣಪ್ಪ ಕುಂಬಾರ, ಶಿವಪುತ್ರಪ್ಪ ಬಿಳೇಭಾವಿ, ಅಭಿಯಂತರ ವೀರೇಶ ಕುಂಬಾರ, ಮಾಲೂಬಾ ಜಾಧವ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-26-1233083075

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.