ತಾಳಿಕೋಟೆ: ತಾಲ್ಲೂಕಿನ ನಾವದಗಿ ಗ್ರಾಮ ಬ್ರಹನ್ಮಠದ ಲಿಂ. ಆಯುರ್ವೇದಿಕ್ ಪಂಡಿತ ಪರ್ವತ ಶಿವಾಚಾರ್ಯ ಸ್ವಾಮೀಜಿ 26ನೇ ವರ್ಷದ ಪುಣ್ಯಸ್ಮರಣೋತ್ಸವದ ಅಂಗವಾಗಿ ಶನಿವಾರ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿದವು.

ಪುಣ್ಯ ಸ್ಮರಣೋತ್ಸವ ಅಂಗವಾಗಿ ಬೆಳಿಗ್ಗೆ 8ಗಂಟೆಗೆ ಶ್ರೀಗಳ ಕರ್ತೃ ಗದ್ದುಗೆ ರುದ್ರಾಭಿಷೇಕ, ಬಿಲ್ವಾರ್ಚನೆ ಹಾಗೂ ವಿಶೇಷ ಪೂಜೆ ವಿಧಿ ವಿಧಾನಗಳು ಮಠದ ರಾಜ ಗುರು ರಾಜೇಂದ್ರ ಒಡೆಯರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಜರುಗಿದವು.

ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪೂಜ್ಯ ಲಿಂಗೈಕ್ಯ ಪರ್ವತ ಶಿವಾಚಾರ್ಯರ ಪಲ್ಲಕ್ಕಿಯೊಂದಿಗೆ ಅವರ ಚಿತ್ರದ ಮೆರವಣಿಗೆ ನಡೆಯಿತು. ಮಧ್ಯಾಹ್ನ 1 ಗಂಟೆಗೆ ನೂತನ ಮಠದಲ್ಲಿ ಮಹಾಪ್ರಸಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಪುಣ್ಯಸ್ಮರಣೋತ್ಸವ ಅಂಗವಾಗಿ ನಡೆದ ಕಾರ್ಯಕ್ರಮಗಳಲ್ಲಿ ನೂರಾರು ಭಕ್ತರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-26-295275339

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.