ತಾಳಿಕೋಟೆ: ತಾಲ್ಲೂಕಿನ ಮೈಲೇಶ್ವರ ಗ್ರಾಮದ ಬಳಿ ನಿರ್ಮಿಸಲು ಉದ್ದೇಶಿರುವ ಪ್ರಜಾಸೌಧ ಜನತೆಗೆ ದೂರವಾಗುತ್ತದೆ. ಅದನ್ನು ಪಟ್ಟಣದ ಸರ್ಕಾರಿ ಸ್ಥಳದಲ್ಲಿಯೇ ನಿರ್ಮಿಸುವಂತೆ ಒತ್ತಾಯಿಸಿ ತಾಳಿಕೋಟೆಯ ಬಸವೇಶ್ವರ ವೃತ್ತದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವು ಬುಧವಾರ 36 ದಿನಗಳನ್ನು ಪೂರೈಸಿತು.

ಈ ಹೋರಾಟಕ್ಕೆ ಬಾವೂರ ಗ್ರಾಮದ ಸರ್ವ ಸಮಾಜದ ಹಿರಿಯರು ಹಾಗೂ ಅಖಂಡ ಕರ್ನಾಟಕ ರೈತ ಸಂಘ ಬೆಂಬಲ ವ್ಯಕ್ತಪಡಿಸಿ ಸತ್ಯಾಗ್ರಹದಲ್ಲಿ ಪಾಲ್ಗೊಂಡರು.

ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹಾಗೂ ಬಾವೂರ ಗ್ರಾಮದ ಮುಖಂಡ ಎಚ್.ಎಸ್. ಪಾಟೀಲ, ಮಾತನಾಡಿ, ‘ತಾಲ್ಲೂಕು ಆಡಳಿತ ಕೇಂದ್ರವು ಸಾರ್ವಜನಿಕರಿಗೆ ಸುಲಭವಾಗಿ ಕೆಲಸ ಕಾರ್ಯಗಳನ್ನು ನಿರ್ವಹಿಸುವಂತಿರಬೇಕು.ಆದರೆ, ಈ ಸ್ಥಳ ಜನತೆಗೆ ದೂರವಾಗುತ್ತದೆ. ಈಗಾಗಲೇ ನಿಗದಿಪಡಿಸಿರುವ ಸ್ಥಳವನ್ನು ಕೂಡಲೇ ರದ್ದುಪಡಿಸಿ, ಪಟ್ಟಣದ ವ್ಯಾಪ್ತಿಯಲ್ಲಿ ಲಭ್ಯವಿರುವ ಸರ್ಕಾರಿ ಜಾಗದಲ್ಲಿಯೇ ಪ್ರಜಾಸೌಧ ನಿರ್ಮಿಸಬೇಕು ಎಂದು ಒತ್ತಾಯಿಸಿದರು.

ಶಾಸಕರಿಗೆ ಹಾಗೂ ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ಕೋಪಕ್ಕೆ ಕಾರಣವಾಗುತ್ತಿದೆ ಎಂದರು.

ಬಾಳಪ್ಪ ಗೌಡ ಲಿಂಗದಳ್ಳಿ, ಸಿದ್ದನಗೌಡ ಪಾಟೀಲ, ಸೈಯದ ಪಟೇಲ ಬಿರಾದಾರ, ಶಂಕರಲಿಂಗ ಆಸ್ಕಿ, ಶಂಕರಲಿಂಗ ಅರವಿ, ಬಸಣ್ಣ ಕುಂಬಾರ, ಬಮ್ಮು ಕೈರುಡಗಿ, ಬಸವರಾಜ ಅರವಿ, ಹನುಮಂತ ಚಲವಾದಿ, ಹೋರಾಟ ಸಮಿತಿ ಅಧ್ಯಕ್ಷ ದಶರಥಸಿಂಗ್ ಮನಗೂಳಿ, ಎಸ್.ಬಿ. ಕಟ್ಟಿಮನಿ, ಆರ್.ಎಸ್. ಪಾಟೀಲ (ಕೂಚಬಾಳ) ಮುತ್ತಪ್ಪ ಚಮಲಾಪುರ, ಕಾಶೀನಾಥ ಮುರಾಳ, ಮುರಿಗೆಪ್ಪ ಸರಶೆಟ್ಟಿ, ದತ್ತು ಹೆಬಸೂರ, ಪರಶುರಾಮ ತಂಗಡಗಿ, ನಾಗೇಶ ಕಟ್ಟಿಮನಿ, ದೇವೇಂದ್ರ ಹಾದಿಮನಿ, ವಿಜಯಸಿಂಗ್ ಹಜೇರಿ, ಮಹೇಶ ಛಲವಾದಿ, ಪ್ರಕಾಶ್ ಹಜೇರಿ, ಮುದಕಪ್ಪ ಬಡಿಗೇರ, ಸಿರಸಕುಮಾರ ಹಜೇರಿ, ಮಲ್ಲು ಮೇಟಿ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-26-2098714254

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.