ತಾಳಿಕೋಟೆ: ತಾಲ್ಲೂಕಿನ ಮೈಲೇಶ್ವರ ಗ್ರಾಮದ ಸಮೀಪ ಪ್ರಜಾಸೌಧ ನಿರ್ಮಾಣ ಸಾರ್ವಜನಿಕರಿಗೆ ದೂರವಾಗುತ್ತದೆಂದು ಪಟ್ಟಣದ ವ್ಯಾಪ್ತಿಯಲ್ಲಿಯೇ ಕಟ್ಟಡ ನಿರ್ಮಿಸಬೇಕೆಂದು ಒತ್ತಾಯಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವು ಶುಕ್ರವಾರಕ್ಕೆ 59 ದಿನಗಳನ್ನು ಪೂರೈಸಿತು.

ಹೋರಾಟದಲ್ಲಿ ಭಾಗವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯಾಧ್ಯಕ ಮಲ್ಲಿಕಾರ್ಜುನ ಬಂಗ್ಲೆ ಮಾತನಾಡಿ,ಜನಪರ ಹೋರಾಟಗಳನ್ನು ಕಾನೂನು ಬಳಸಿ ಹತ್ತಿಕ್ಕಲಾಗದು ಎಂದರು.

‘ಶಾಸಕರು ಸ್ಥಳಕ್ಕೆ ಬಂದು ಸೌಹಾರ್ದಯುತವಾಗಿ ಮಾತನಾಡಿ, ಹತ್ತಿರದ ಸರ್ಕಾರಿ ಸ್ಥಳದಲ್ಲಿಯೇ ಪ್ರಜಾಸೌಧ ನಿರ್ಮಿಸಿಕೊಡಿ, ನಾವೆಲ್ಲ ಹೋರಾಟಗಾರರ ಜೊತೆ ನಿಲ್ಲುತ್ತಿದ್ದೇವೆ. ಉಪವಾಸ ಸತ್ಯಾಗ್ರಹ ನಡೆದರೆ ನಾವೂ ಭಾಗವಹಿಸುತ್ತೇವೆ’ ಎಂದು ಹೇಳಿದರು.

ಇವರೊಂದಿಗೆ ರಾಜ್ಯ ಉಪಾಧ್ಯಕ್ಷ ಎಸ್.ಎಸ್.ಪಾಟೀಲ ಧಾರವಾಡ ಜಿಲ್ಲಾಧ್ಯಕ್ಷ ಸಂಗನಗೌಡ ಹೂವನ್ನವರ, ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದು, ಜಿಲ್ಲಾ ಉಪಾಧ್ಯಕ್ಷ ಸಿದ್ದು ಕಲ್ಲೂರ, ಬಸವರಾಜ ಪಡಶೆಟ್ಟಿ, ಅಶೋಕ ಕಲ್ಯಾಣಶೆಟ್ಟಿ ಹಾಗೂ ಹೋರಾಟ ಸಮಿತಿಯವರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-26-3156817

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.