ತಾಳಿಕೋಟೆ: ತಾಲ್ಲೂಕಿನ ಮೈಲೇಶ್ವರ ಗ್ರಾಮದ ಸಮೀಪ ಪ್ರಜಾಸೌಧ ನಿರ್ಮಾಣಕ್ಕೆ ಗುರುತಿಸಲಾದ ಸ್ಥಳವನ್ನು ವಿರೋಧಿಸಿ, ಪಟ್ಟಣದಲ್ಲಿಯೇ ನಿರ್ಮಿಸಬೇಕೆಂದು ಆಗ್ರಹಿಸಿ ಪಟ್ಟಣದ ಬಸವೇಶ್ವರ ವೃತ್ತದ ಬಳಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವು ಭಾನುವಾರ 33ನೇ ದಿನ ಪೂರೈಸಿತು.

ಬೋಳವಾಡ ಗ್ರಾಮದ ಹಿರಿಯರಾದ ಪರಪ್ಪ ಹರಿಜನ ಮತ್ತು ಶಾಂತಗೌಡ ಪಾಟೀಲ ಮಾತನಾಡಿ, ‘ಪ್ರಜಾಸೌಧ ನಿರ್ಮಾಣಕ್ಕೆ ಆಯ್ಕೆ ಮಾಡಿರುವ ಸ್ಥಳವು ಪಟ್ಟಣದಿಂದ ದೂರ ಹಾಗೂ ನಿರ್ಜನ ಪ್ರದೇಶದಲ್ಲಿದೆ. ಇಂತಹ ಸ್ಥಳದಲ್ಲಿ ಸರ್ಕಾರಿ ಕಚೇರಿ ನಿರ್ಮಾಣವಾದರೆ ಮಹಿಳೆಯರು, ವಿದ್ಯಾರ್ಥಿನಿಯರು ಹಾಗೂ ಸಾರ್ವಜನಿಕರಿಗೆ ಭದ್ರತೆ ಮತ್ತು ಸೌಲಭ್ಯಗಳ ಕೊರತೆ ಎದುರಾಗಲಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

‘ಸಾರ್ವಜನಿಕರು ಸುಲಭವಾಗಿ ತಲುಪುವಂತಹ ಸ್ಥಳದಲ್ಲಿ, ಲಭ್ಯವಿರುವ ಸರ್ಕಾರಿ ಜಾಗದಲ್ಲಿ ಪ್ರಜಾಸೌಧ ನಿರ್ಮಿಸಬೇಕು. ಈಗಾಗಲೇ ಗುರುತಿಸಲಾದ ಸ್ಥಳವನ್ನು ತಕ್ಷಣವೇ ರದ್ದುಪಡಿಸಬೇಕು’ ಎಂದರು.

ಬೋಳವಾಡ ಗ್ರಾಮದ ಬಸವರಾಜ ಅಮಲ್ಯಾಳ, ಪ್ರಶಾಂತ ಹಿರೇಮಠ, ಮಲಕಪ್ಪ ಹರಿಜನ, ಪರಶುರಾಮ ಹರಿಜನ, ನಂದನಗೌಡ ಪಾಟೀಲ, ಸಿದ್ದನಗೌಡ ಪಾಟೀಲ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-26-1760875650

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.