ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತಾಳಿಕೋಟೆ ಬಂದ್‌ ನಾಳೆ

Published : 22 ಆಗಸ್ಟ್ 2024, 15:10 IST
Last Updated : 22 ಆಗಸ್ಟ್ 2024, 15:10 IST
ಫಾಲೋ ಮಾಡಿ
Comments

ತಾಳಿಕೋಟೆ: ‘ಸಹೋದ್ಯೋಗಿಗಳು ಹಾಗೂ ಮೇಲಾಧಿಕಾರಿಗಳ ಮಾನಸಿಕ ಕಿರುಕುಳದಿಂದ ಬೇಸತ್ತು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದ ನಮ್ಮ ಸಮಾಜದ ಶಶಿಕಾಂತ ಬೆಣ್ಣೂರ ಆತ್ಮಹತ್ಯೆ ಮಾಡಿಕೊಂಡಿದ್ದು, ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಒತ್ತಾಯಿಸಿ ಆಗಸ್ಟ್ 23ರಂದು ಪಟ್ಟಣದ ಸಂಪೂರ್ಣ ಬಂದ್‌ಗೆ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟ ಕರೆ ನೀಡಿದೆ. ನಾಗರಿಕರು ಸಹಕರಿಸಬೇಕು’ ಎಂದು ಮುಖಂಡ ಬಸವರಾಜ ಕಟ್ಟಿಮನಿ ಹೇಳಿದರು.

ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಈ ದೌರ್ಜನ್ಯ ಮತ್ತು ಅನ್ಯಾಯವನ್ನು ದಲಿತ ಸಮುದಾಯ ಯಾವ ಕಾರಣಕ್ಕೂ ಸಹಿಸುವುದಿಲ್ಲ ತಪ್ಪಿತಸ್ಥರನ್ನು ಬಂಧಿಸದೆ ಹೋದಲ್ಲಿ ತೀವ್ರ ಹೋರಾಟ ಮಾಡುತ್ತೇವೆ ಎಂದರು.

ಸಂಘಟನೆಯ ವಿಭಾಗಿಯ ಸಂಚಾಲಕ ದೇವೇಂದ್ರ ಹಾದಿಮನಿ ಮಾತನಾಡಿ, ರಾಜ್ಯದಲ್ಲಿ ಪದೇ ಪದೇ ಈ ರೀತಿಯ ಘಟನೆಗಳು ನಡೆಯುತ್ತಿವೆ. ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ನೀಡಲು ಆಗ್ರಹಿಸುತ್ತೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಗೌರವಾಧ್ಯಕ್ಷ ಎಸ್.ಬಿ.ಕಟ್ಟಿಮನಿ, ಅಧ್ಯಕ್ಷ ಮುತ್ತಪ್ಪ ಚಮಲಾಪುರ್, ಉಪಾಧ್ಯಕ್ಷ ಬಿ.ಬಿ.ಕಟ್ಟಿಮನಿ, ಪ್ರಧಾನ ಕಾರ್ಯದರ್ಶಿ ಮಹೇಶ್ ಚಲವಾದಿ, ಡಿ.ಬಿ ಹಾದಿಮನಿ, ಮಾಳಪ್ಪ ಬಳ್ಳಿ, ರವಿ ಕಟ್ಟಿಮನಿ, ವಿಶ್ವನಾಥ್ ಚಲವಾದಿ, ಶಂಕರ ಕಟ್ಟಿಮನಿ, ಗೋಪಾಲ್ ಕಟ್ಟಿಮನಿ, ನಾಗೇಶ್ ಕಟ್ಟಿಮನಿ, ಪರುಶುರಾಮ ಕಟ್ಟಿಮನಿ, ಬಸವರಾಜ್ ತಳವಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT