ವಿಜಯಪುರ: ಬಸವನಬಾಗೇವಾಡಿ ಸಮೀಪದ ನಾಗೂರ ಗ್ರಾಮದ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಸಿ.ಎಸ್.ಹಡಪದ (54) ಶಾಲೆಯಲ್ಲೇ ಬುಧವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಎರಡು ವರ್ಷದಿಂದ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಕಳೆದ ಒಂದು ವರ್ಷದಿಂದ ಪ್ರಭಾರ ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸುತಿದ್ದರು. ಶಾಲೆ ಆರಂಭವಾಗಿರುವಾಗಲೇ ಸ್ಟಾಕ್‌ರೂಂಗೆ ಹೋಗಿ ನೇಣು ಬಿಗಿದುಕೊಂಡಿದ್ದಾರೆ. ಶಾಲಾ ಅವಧಿ ಮುಗಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಬಸವನಬಾಗೇವಾಡಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆಗೆ ಮುಂದಾಗಿದ್ದಾರೆ.

‘ಶಿಕ್ಷಕ ಆತ್ಮಹತ್ಯೆ ಪ್ರಕರಣದ ಬಗ್ಗೆ ಸೂಕ್ತ ತನಿಖೆಯಾಗಬೇಕು’ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಬಸವನ ಬಾಗೇವಾಡಿ ತಾಲ್ಲೂಕು ಘಟಕದ ಅಧ್ಯಕ್ಷ ಶಿವಾನಂದ ಮಂಗಾನವರ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.