ಇಂಡಿ: ಯಾವುದೇ ಶಿಕ್ಷಣ ಸಂಸ್ಥೆಯ ಪ್ರಗತಿಯಲ್ಲಿ ಆಡಳಿತ ಮಂಡಳಿ ಅಷ್ಟೇ ಅಲ್ಲ. ಅಲ್ಲಿನ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು ಎಂಬುದಕ್ಕೆ ಎಚ್.ಎಂ.ಬಿಳ್ವಾರ ಅವರ ಸೇವೆಯೇ ಸಾಕ್ಷಿಯಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ನಗರದ ಅಂಜುಮನ್ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಹುಮಾಯುನ ಬಿಳವಾರ ಅವರ ನಿವೃತ್ತಿ ಅಂಗವಾಗಿ ಅಂಜುಮನ್ ಸಂಸ್ಥೆಯಿಂದ ಶನಿವಾರ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

ಶಾಕೀರ ಮಾಲಾನಾ ಕಾಸ್ಮಿ ಮಾತನಾಡಿ, ಶಿಕ್ಷಣ ಕ್ಷೇತ್ರದ ಜೊತೆಗೆ ಸಾಮಾಜಿಕ ಸೇವೆಯಲ್ಲೂ ಸದಾ ಮುಂಚೂಣಿಯಲ್ಲಿದ್ದು ಕಾರ್ಯನಿರ್ವಹಿಸಿದ ದೈಹಿಕ ಶಿಕ್ಷಕ ಬಿಳವಾರ ಗುರುಗಳ ದೀರ್ಘಕಾಲದ ಸೇವೆ ಸ್ಮರಣೀಯ ಎಂದರು.

ನಿವೃತ್ತ ಶಿಕ್ಷಕ ಹುಮಾಯುನ ಬಿಳವಾರ, ಮುಖ್ಯಗುರು ಮುಜಿಲ ಬಾಗವಾನ ಮಾತನಾಡಿದರು. ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭೀಮಣ್ಣ ಕವಲಗಿ, ಗ್ಯಾರಂಟಿ ಯೋಜನೆಯ ಜಿಲ್ಲಾ ಅಧ್ಯಕ್ಷ ಇಲಿಯಾಸ ಬೋರಾಮಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಯಿದಾ ಮುಜಾವರ, ಜಗದೀಶ ಕ್ಷತ್ರಿಮ ಫಾರುಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.