ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಜಯಪುರ | ಶಿಕ್ಷಕ ಸಂಘದ ಚುನಾವಣೆ: ದಿನಾಂಕ ನಿಗದಿ

Published 22 ಜೂನ್ 2024, 15:48 IST
Last Updated 22 ಜೂನ್ 2024, 15:48 IST
ಅಕ್ಷರ ಗಾತ್ರ

ವಿಜಯಪುರ: ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಿಜಯಪುರ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳ ವ್ಯಾಪ್ತಿಯ 2024-25ನೇ ಸಾಲಿನ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ಘೋಷಣೆಯಾಗಿದ್ದು, ದಿನಾಂಕ ನಿಗದಿ ಮಾಡಲಾಗಿದೆ.

ತಾಲ್ಲೂಕು ಮಟ್ಟದ ಪದಾಧಿಕಾರಿಗಳ ಆಯ್ಕೆಗೆ ಜೂನ್ 24ರಿಂದ 29ರ ವರೆಗೆ ನಾಮಪತ್ರ ಸಲ್ಲಿಸಬಹುದು. ಜುಲೈ 1ರಂದು ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನವಾಗಿದ್ದು, ಜುಲೈ 7ರಂದು ಚುನಾವಣೆ ನಡೆಯಲಿದೆ. ಅಂದೇ ಫಲಿತಾಂಶವನ್ನು ಘೋಷಣೆ ಆಗಲಿದೆ.

ಜಿಲ್ಲಾ ಘಟಕದ ಪದಾಧಿಕಾರಿಗಳ ಆಯ್ಕೆಗೆ ಜುಲೈ 15 ರಿಂದ 17ರ ವರೆಗೆ ನಾಮಪತ್ರ ಸ್ವೀಕಾರ ನಡೆಯಲಿದ್ದು, ಜುಲೈ 20 ರಂದು ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನವಾಗಿದೆ. ಚುನಾವಣೆ ಜುಲೈ 21 ರಂದು ನಡೆದು ಅಂದೆ ಫಲಿತಾಂಶ ಘೋಷಣೆ ಆಗಲಿದೆ.

ರಾಜ್ಯಮಟ್ಟದ ಪದಾಧಿಕಾರಿಗಳ ಆಯ್ಕೆಗೆ ಜುಲೈ 22 ರಿಂದ 27ರ ವರೆಗೆ ನಾಮಪತ್ರ ಸ್ವೀಕರಿಸಲಿದ್ದು, ಜುಲೈ 29ರಂದು ನಾಮಪತ್ರ ವಾಪಸ್ ಪಡೆಯಲು ಅವಕಾಶ ನೀಡಲಾಗಿದೆ. ಆಗಸ್ಟ್ 4 ರಂದು ಚುನಾವಣೆ ನಡೆದು ಅಂದು ಸಂಜೆ ಫಲಿತಾಂಶ ಹೊರಬೀಳಲಿದೆ ಎಂದು ವಿಜಯಪುರ ಜಿಲ್ಲಾಧ್ಯಕ್ಷ ಶಿವಾನಂದ ಹಿರೇಕುರಬರ ಪ್ರಕಟಣೆಯಲ್ಲಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT