ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರದಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆ ಸುಸೂತ್ರ

ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರೀಕ್ಷಾ ಕೇಂದ್ರಕ್ಕೆ ಭೇಟಿ 
Last Updated 21 ಮೇ 2022, 12:59 IST
ಅಕ್ಷರ ಗಾತ್ರ

ವಿಜಯಪುರ: ಪದವೀಧರ ಪ್ರಾಥಮಿಕ ಶಿಕ್ಷಕರ (6 ರಿಂದ 8ನೇ ತರಗತಿ) ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯು ನಗರದಲ್ಲಿ ಶನಿವಾರ ಯಾವುದೇ ಗೊಂದಲಗಳಿಲ್ಲದೇ ಸುಸೂತ್ರವಾಗಿ ನಡೆಯಿತು.

ನಗರದ 16 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಜಿಲ್ಲೆಯ, ಹೊರ ಜಿಲ್ಲೆಯ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದದ್ದರು.

ಪರೀಕ್ಷೆ ಆರಂಭಕ್ಕೂ ಒಂದು ತಾಸು ಮೊದಲೇ ಪರೀಕ್ಷಾ ಕೇಂದ್ರದ ಬಳಿ ಅಭ್ಯರ್ಥಿಗಳು ಹಾಜರಿದ್ದರು. ಪರೀಕ್ಷಾ ಅಕ್ರಮಗಳು ನಡೆಯದಂತೆ ತಡೆಯಲು ಪರೀಕ್ಷಾರ್ಥಿಗಳನ್ನು ತೀವ್ರ ತಪಾಸಣೆಗೆ ಒಳಪಡಿಸಿ ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಯಿತು.

1385 ಅಭ್ಯರ್ಥಿಗಳು ಗೈರು:

ಶನಿವಾರ ಬೆಳಿಗ್ಗೆ ನಡೆದಸಾಮಾನ್ಯ ಜ್ಞಾನ ಪರೀಕ್ಷೆಗೆ 4330 ಅಭ್ಯರ್ಥಿಗಳು ನೋಂದಾಯಿಸಿದ್ದರು. ಆದರೆ, ಈ ಪರೀಕ್ಷೆಗೆ 3185 ಅಭ್ಯರ್ಥಿಗಳು ಹಾಜರಾಗಿದ್ದು, 1145 ಅಭ್ಯರ್ಥಿಗಳು ಗೈರು ಹಾಜರಾಗಿದ್ದರು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್‌.ವಿ.ಹೊಸೂರ ‘ಪ್ರಜಾವಾಣಿ’ಗೆ ತಿಳಿಸಿದರು.

ಮಧ್ಯಾಹ್ನದ ಅವಧಿಗೆ ನಡೆದ ಆಂಗ್ಲಭಾಷಾ ಶಿಕ್ಷಕರ ನೇಮಕಾತಿಯ ಪರೀಕ್ಷೆಗೆ ಒಟ್ಟು 1011 ಅಭ್ಯರ್ಥಿಗಳು ನೋಂದಣಿಯಾಗಿದ್ದು, 771 ಅಭ್ಯರ್ಥಿಗಳು ಹಾಜರಾಗಿರುತ್ತಾರೆ ಹಾಗೂ 240 ಅಭ್ಯರ್ಥಿಗಳು ಗೈರುಹಾಜರಾಗಿರುತ್ತಾರೆ ಎಂದು ಹೇಳಿದರು.

ನಿಷೇಧಾಜ್ಞೆ:

ಪರೀಕ್ಷಾ ಕೇಂದ್ರಗಳ ಸುತ್ತಲು 200 ಮೀಟರ್ ವ್ಯಾಪ್ತಿಯೊಳಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿತ್ತು. ಪರೀಕ್ಷಾರ್ಥಿಗಳಿಗೆ ಮೊಬೈಲ್, ಕ್ಯಾಲ್ಯೂಕ್ಲೀಟರ್, ಎಲೆಕ್ಟ್ರಾನಿಕ್ಸ್ ವಾಚ್, ಮೈಕ್ರೋ ಫೋನ್, ಬ್ಲೂ ಟೂತ್ ಹಾಗೂ ಇತರೆ ಎಲ್ಲಾ ಎಲೆಕ್ಟ್ರಾನಿಕ ಉಪಕರಣಗಳನ್ನು ತರುವುದು ನಿಷೇಧಿಸಲಾಗಿತ್ತು.

ಯಾವುದೇ ರೀತಿಯ ಕೈ ಗಡಿಯಾರ ತೊಡಲು ಅನುಮತಿ ನೀಡಲಿಲ್ಲ. ಪ್ರತಿ ಕೊಠಡಿಯಲ್ಲೂ ಸಮಯ ಪಾಲನೆಗಾಗಿ ಗೋಡೆ ಗಡಿಯಾರಗಳನ್ನು ಅಳವಡಿಸಲಾಗಿತ್ತು.

‌ಜಾಮಿಟಿ ಬಾಕ್ಸ್‌ಗಳನ್ನು ತಪಾಸಣೆಗೊಳಪಡಿಸಿ, ರೇಖಾ ಗಣಿತ ಪರಿಕರಗಳನ್ನು ಮಾತ್ರ ಅನುಮತಿ ನೀಡಲಾಗಿತ್ತು.

ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಝರಾಕ್ಸ್‌ ಅಂಗಡಿಗಳು, ಕಂಪ್ಯೂಟರ್‌ ಸೆಂಟರ್‌, ಸೈಬರ್ ಕೆಫೆ, ಕೋಚಿಂಗ್ ಕೇಂದ್ರಗಳ ಬಾಗಿಲು ಮುಚ್ಚಿಸಲಾಗಿತ್ತು.ಪರೀಕ್ಷಾ ಕೇಂದ್ರಗಳ ಎದುರು ಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು.

ಡಿಸಿ, ಎಸ್‌ಪಿ ಭೇಟಿ:

ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಎಚ್.ಡಿ.ಆನಂದಕುಮಾರ್‌ ಅವರುನಗರದ ಶ್ರೀ ಸಿದ್ದೇಶ್ವರ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಕೇಂದ್ರ ಹಾಗೂ ಕಿರೀಟಮಠ ವೇದಾಂತಚಾರ್ಯ ಮೃತ್ಯುಂಜಯ ಮಹಾಸ್ವಾಮೀಜಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಸ್ವತಂತ್ರ ಪದವಿ ಪೂರ್ವ ವಿದ್ಯಾಲಯದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ, ಖುದ್ದು ಪರಿಶೀಲಿಸಿದರು.

ಮೇ 22ರಂದು ಪದವೀಧರ ಶಿಕ್ಷಕರ ನೇಮಕಾತಿ ಪರೀಕ್ಷೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT