ಶುಕ್ರವಾರ, ಆಗಸ್ಟ್ 12, 2022
22 °C

ಅಂಗವಿಕಲರಿಗೆ ₹ 10 ಸಾವಿರ ಪರಿಹಾರ ಧನಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಕೋವಿಡ್‌ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದ ಅಂಗವಿಕಲರಿಗೆ ತಲಾ ₹10 ಸಾವಿರ ಪರಿಹಾರ ಧನ ನೀಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ, ಕೆ.ಪಿ.ಸಿ.ಸಿ ವಕ್ತಾರ ಪ್ರಕಾಶ್ ರಾಠೋಡ ಸರ್ಕಾರಕ್ಕೆ ಒತ್ತಾಯಿಸಿದರು.

ನಗರದ ರೈಲು ನಿಲ್ದಾಣ ಹತ್ತಿರ ನಡೆದ ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ಆಹಾರ ಧಾನ್ಯದ ಕಿಟ್‌ಗಳನ್ನು ವಿತರಿಸಿ ಅವರು ಮಾತನಾಡಿದರು.

ಕೋವಿಡ್-19ರ ಬಗ್ಗೆ ಯಾರೂ ಭಯಪಡಬಾರದು, ಎಲ್ಲರು ಮಾಸ್ಕ್‌ ಧರಿಸಬೇಕು, ಮೂಢನಂಬಿಕೆಯನ್ನು ಬಿಟ್ಟು ಎಲ್ಲರು ಲಸಿಕೆಗಳನ್ನು ಹಾಕಿಸಿಕೊಂಡು ತಮ್ಮ ಪ್ರಾಣವನ್ನು ಉಳಿಸಿಕೊಳ್ಳಿ ಎಂದು ಹೇಳಿದರು.

ಕಾಂಗ್ರೆಸ್‌ ಮುಖಂಡರಾದ ಮಹಮ್ಮದ ರಫೀಕ ಟಪಾಲ, ಎಂ.ಎಸ್‌.ನಾಯಕ, ಅಶೋಕ ರಾಠೋಡ, ದಾಮು ಪವಾರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು