ಭಾನುವಾರ, ಮೇ 16, 2021
28 °C
ಪ್ರತಿ ದಿನ 10 ಸಾವಿರ ಡೋಸ್ ಲಸಿಕೆ ನೀಡುವ ಗುರಿ: ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್

ಕೋವಿಡ್ ಲಸಿಕಾ ಉತ್ಸವ ಇಂದಿನಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಕೋವಿಡ್-19 ಲಸಿಕೆ ಅಭಿಯಾನದಡಿ ಜಿಲ್ಲೆಯಲ್ಲಿ ಏಪ್ರಿಲ್‌ 11 ಮತ್ತು 12ರಂದು ಕೋವಿಡ್‌ ಲಸಿಕಾ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.

ಪ್ರಸ್ತುತ ಜಿಲ್ಲೆಯಲ್ಲಿ 30 ಸಾವಿರ ಕೋವಿಡ್ 19 ಲಸಿಕೆಯ ಡೋಸ್ ದಾಸ್ತಾನು ಇದ್ದು, ಪ್ರತಿ ದಿನ 10 ಸಾವಿರ ಡೋಸ್ ಲಸಿಕೆ ನೀಡುವ ಗುರಿ ನಿಗದಿಪಡಿಸಿದೆ ಎಂದರು.

ಏಪ್ರಿಲ್ 1 ರಿಂದ ಜಿಲ್ಲೆಯಲ್ಲಿ ನಾಲ್ಕನೇ ಹಂತದ ಲಸಿಕಾ ಅಭಿಯಾನ ಪ್ರಾರಂಭವಾಗಿದ್ದು, ಸಾರ್ವಜನಿಕರು ಲಸಿಕೆ ಹಾಕಿಸಿಕೊಳ್ಳುವ ಸಮಯದಲ್ಲಿ ನೋಂದಣಿ ಮಾಡಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ. 45 ವರ್ಷ ವಯಸ್ಸಿನ ಮೇಲ್ಪಟ್ಟವರು ಲಸಿಕೆ ಪಡೆಯಬಹುದಾಗಿದೆ ಎಂದರು.

ಈಗಾಗಲೇ ಜಿಲ್ಲೆಯ ಎಲ್ಲ ಆರೋಗ್ಯ ಸಂಸ್ಥೆಗಳಲ್ಲಿ ಕೋವಿಡ್-19 ಲಸಿಕೆ ನೀಡಲಾಗುತ್ತಿದೆ. ಹೆಚ್ಚುವರಿಯಾಗಿ ಇನ್ನು ಮುಂದೆ ಗ್ರಾಮೀಣ ಪ್ರದೇಶದ ಆಯ್ದ ಉಪಕೇಂದ್ರಗಳಲ್ಲಿ ನಿಗದಿಪಡಿಸಿದ ದಿನಾಂಕಗಳಂದು ಲಸಿಕೆ ಹಾಕಲಾಗುವುದು. ಪ್ರತಿ ದಿನ ಪ್ರತಿ ಉಪಕೇಂದ್ರಗಳಲ್ಲಿ 100 ಡೋಸ್ ಲಸಿಕೆ ಹಾಕುವ ಗುರಿ ನಿಗದಿಪಡಿಸಿದೆ ಎಂದರು.

ಸ್ಥಳೀಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ಎನ್‌ಜಿಒ ಸಿಬ್ಬಂದಿ ಸಹಾಯದಿಂದ ಕೋವಿಡ್ 19 ಆ್ಯಪ್‌ನಲ್ಲಿ ಫಲಾನುಭವಿಗಳ ಎಂಟ್ರಿ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.

ಕೋವಿಡ್ -19 ಲಸಿಕೆ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಸಂಪೂರ್ಣ ಉಚಿತವಾಗಿದ್ದು. ಸಾರ್ವಜನಿಕರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಸಾರ್ವಜನಿಕರಿಗೆ ಕೋವಿಡ್ -19 ಲಸಿಕೆಯ ಕುರಿತು ಮನವೊಲಿಸಿ ಲಸಿಕೆ ಹಾಕಿಸಿಕೊಳ್ಳಲು ಆರೋಗ್ಯ ಸಹಾಯಕರು, ಆಶಾಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಜಿಲ್ಲೆಯ ಸರ್ಕಾರಿ ಆಸ್ಪತ್ರೆ ಹಾಗೂ ಆರೋಗ್ಯ ಉಪಕೇಂದ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಲಸಿಕೆಯನ್ನು ಬೆಳ್ಳಿಗೆ 10 ರಿಂದ ಸಂಜೆ 4 ರ ವರೆಗೆ ಹಾಕಲಾಗುವುದು ಎಂದರು.  

ಜಿಲ್ಲೆಯ ಇಲ್ಲಿಯವರೆಗೆ 76,637 ಹಿರಿಯ ನಾಗರಿಕರಿಗೆ ಹಾಗೂ 45 ರಿಂದ 60 ವರ್ಷದ ವಯಸ್ಸಿನ 62,827 ಜನರಿಗೆ ಕೂಡ ಲಸಿಕೆ ನೀಡಲಾಗಿದೆ. ಮುಂಚೂಣಿ ಕಾರ್ಯಕರ್ತೆಯರಿಗೂ ಮತ್ತು ಆರೋಗ್ಯ ಕಾರ್ಯಕರ್ತರಿಗೂ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

***

ಮುಂಬರುವ ದಿನಗಳಲ್ಲಿ ರಾಜ್ಯದಿಂದ ಜಿಲ್ಲೆಗೆ ಅಗತ್ಯವಿರುವ ಲಸಿಕೆ ಸರಬರಾಜು ಮಾಡುವ ಸಾಧ್ಯತೆ ಇದ್ದು, ಲಸಿಕಾ ಕಾರ್ಯಕ್ರಮ ಮುಂದುವರೆಸಲಾಗುವುದು 

ಪಿ.ಸುನೀಲ್ ಕುಮಾರ್, ಜಿಲ್ಲಾಧಿಕಾರಿ 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು