ಆಲಮಟ್ಟಿ: ಆಲಮಟ್ಟಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಅಬ್ಬರ ಶನಿವಾರವೂ ಮುಂದುವರಿದಿದೆ. ಸಂಜೆಯ ವೇಳೆಗೆ ಒಳಹರಿವು 1,18,916 ಕ್ಯುಸೆಕ್ ನೀರಿಗೆ ಏರಿಕೆಯಾಗಿದೆ.

ಶನಿವಾರ ಜಲಾಶಯಕ್ಕೆ ಒಂದೇ ದಿನ 83,945 ಕ್ಯುಸೆಕ್ ನೀರು (7,25 ಟಿಎಂಸಿ ಅಡಿ) ಹರಿದು ಬಂದಿದೆ. ಜಲಾಶಯದ ಹೊರಹರಿವನ್ನು ಶನಿವಾರ ಮಧ್ಯಾಹ್ನದಿಂದ 6000 ಕ್ಯುಸೆಕ್‌ಗೆ ಹೆಚ್ಚಿಸಲಾಗಿದೆ. ಇದರಿಂದಾಗಿ ಆಲಮಟ್ಟಿ ವಿದ್ಯುತ್ ಉತ್ಪಾದನಾ ಘಟಕದ ಆರು ಘಟಕಗಳ ಪೈಕಿ 55 ಮೆಗಾವಾಟ್ ಸಾಮರ್ಥ್ಯದ ಎರಡು ಘಟಕಗಳನ್ನು ಆರಂಭಿಸಲಾಗಿದೆ. ಅದರ ಮೂಲಕ 50 ಮೆಗಾ ವಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ ಎಂದು ಕೆಪಿಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಭರ್ತಿಯ ಆತಂಕ ದೂರ: ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕಳೆದ ವಾರ ಆಲಮಟ್ಟಿ ಜಲಾಶಯ ಭರ್ತಿಯಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿತ್ತು. ಆದರೆ ಈಗ ಸತತ ಒಳಹರಿವು ಹೆಚ್ಚಳವಾಗಿದ್ದರಿಂದ ಕಳೆದ ವಾರ ಜಲಾಶಯ ಭರ್ತಿಯ ಬಗ್ಗೆ ಇದ್ದ ಆತಂಕ ಈಗ ಸರಿದಿದೆ. ಕುಡಿಯುವ ನೀರಿಗಾಗಿ, ಕೆರೆಗಳ ಭರ್ತಿಗಾಗಿ ಬಿಡಲು ನಿರ್ಧರಿಸಿದ ನೀರನ್ನು ಕಾಲುವೆಗಳ ಮೂಲಕ ಹರಿಸುವುದನ್ನು ಆರಂಭಿಸಲಾಗಿದೆ.

ಹೊರಹರಿವು ಆರಂಭಿಸಿದ್ದರಿಂದ ಬತ್ತಿದ್ದ ಆಲಮಟ್ಟಿ ಜಲಾಶಯದ ಮುಂಭಾಗದ ಕೃಷ್ಣಾ ನದಿ ತಳಪಾತ್ರಕ್ಕೆ ಜೀವ ಕಳೆ ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.