ಸೋಮವಾರ, ಜುಲೈ 26, 2021
27 °C

ಸಿಂದಗಿ | ತಾಯಿಯಾದ 13 ವರ್ಷದ ಬಾಲಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಂದಗಿ (ವಿಜಯಪುರ): ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ 13 ವರ್ಷದ ಬಾಲಕಿಯೊಬ್ಬಳು ಮಗುವಿಗೆ ಶನಿವಾರ ಜನ್ಮ ನೀಡಿದ್ದಾಳೆ.

‘ಬಾಲಕಿಯನ್ನು ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿದ್ದ ವ್ಯಕ್ತಿ ಒಂದು ವರ್ಷದಿಂದ ಲೈಂಗಿಕ ಸಂಪರ್ಕ ಹೊಂದಿದ್ದ. ಯಾರಿಗಾದರೂ
ಈ ವಿಷಯ ಹೇಳಿದರೆ ಕೊಲೆ ಬೆದರಿಕೆ ಹಾಕಿದ್ದ’ ಎಂದು ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.

35 ವಯಸ್ಸಿನ ಆರೋಪಿಯನ್ನು ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ. ದುಡಿಯಲು ಬೆಂಗಳೂರಿಗೆ ಹೋಗಿದ್ದ ಆರೋಪಿ ಮತ್ತು ಬಾಲಕಿ ಮನೆಯವರು ಒಂದೇ ಕಡೆ ವಾಸವಾಗಿದ್ದರು. ವಿಜಯಪುರ ಮಕ್ಕಳ ಸಹಾಯವಾಣಿ ನಿರ್ದೇಶಕಿ ಸುನಂದಾ ತೋಳಬಂದಿ ಭಾನುವಾರ ಸಂಜೆ ಪಟ್ಟಣಕ್ಕೆ ಬಂದು ಬಾಲಕಿಯ ತಾಯಿಯ ಮುಖಾಂತರ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು