ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಡಗುಂದಿ | ಜಮೀನು ವಿವಾದ: ವೃದ್ಧನ ಕೊಲೆ

Published 30 ಮೇ 2024, 15:55 IST
Last Updated 30 ಮೇ 2024, 15:55 IST
ಅಕ್ಷರ ಗಾತ್ರ

ನಿಡಗುಂದಿ: ಜಮೀನು‌ ವಿವಾದದ ಹಿನ್ನಲೆಯಲ್ಲಿ ವೃದ್ಧನೊಬ್ಬನನ್ನು ಕೊಲೆ ಮಾಡಿದ ಘಟನೆ ತಾಲ್ಲೂಕಿನ ಚಿಮ್ಮಲಗಿ ಭಾಗ –2 ಗ್ರಾಮದಲ್ಲಿ ನಡೆದಿದೆ.

ಹನುಮಂತ ಲಮಾಣಿ(80) ಕೊಲೆಯಾದ ವ್ಯಕ್ತಿ. ರಾಮು ಲಮಾಣಿ ಸೇರಿದಂತೆ 12 ಜನರು ಸೇರಿ ಕೊಲೆ ಮಾಡಿದ್ದಾರೆಂದು ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಮೀನಿನ ಬದುವಿನ ಸಲುವಾಗಿ ಎರಡು ಕುಟುಂಬಗಳ ಮಧ್ಯೆ ಬುಧವಾರ ರಾತ್ರಿ ಜಗಳವಾಗಿದ್ದು, ಜಗಳ ವಿಕೋಪಕ್ಕೆ ತಿರುಗಿ ಹೊಡೆದಾಟ ಆಗಿದ್ದರಿಂದ ಹನುಮಂತ ಅವರಿಗೆ ತೀವ್ರ ಗಾಯಗಳಾಗಿದ್ದವು. ಅವರನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ ಸೋನಾವಾಲೆ, ಹೆಚ್ಚುವರಿ ಎಸ್‌.ಪಿ ಶಂಕರ ಮಾರಿಹಾಳ, ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿ ಗುರುವಾರ ಭೇಟಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT