ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ದೇಶದ ಪ್ರಗತಿಯಲ್ಲಿ ವಿಜ್ಞಾನದ ಪಾತ್ರ ಅಪಾರ’

Published 1 ಫೆಬ್ರುವರಿ 2024, 14:00 IST
Last Updated 1 ಫೆಬ್ರುವರಿ 2024, 14:00 IST
ಅಕ್ಷರ ಗಾತ್ರ

ವಿಜಯಪುರ: ದೇಶದ ಪ್ರಗತಿಯಲ್ಲಿ ವಿಜ್ಞಾನ ಸಂವಹನವು ಮಹತ್ತರ ಪಾತ್ರ ನಿರ್ವಹಿಸುತ್ತದೆ ಎಂದು ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಹೇಳಿದರು.

ಇಲ್ಲಿನ ಮಹಿಳಾ ವಿಶ್ವವಿದ್ಯಾಲಯದಲ್ಲಿ ಭಾರತೀಯ ವಿಜ್ಞಾನ ಕಾಂಗ್ರೆಸ್ ಅಸೋಸಿಯೇಷನ್ ವಿಜಯಪುರ ಘಟಕ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ‘ಪ್ರಾದೇಶಿಕ ಭಾಷೆಗಳಲ್ಲಿ ವಿಜ್ಞಾನ ಸಂವಹನ’ ಕುರಿತ ಒಂದು ದಿನದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

‘ಇಂದಿನ ಯುಗದಲ್ಲಿ ವಿಜ್ಞಾನ ಸಂವಹನ ‘ಅವಶ್ಯಕವಾಗಿದ್ದು, ‘ಮಕ್ಕಳಿಗೆ ಅದನ್ನು ಅರ್ಥೈಯಿಸುವ ಅವಶ್ಯಕತೆಯೂ ಇದೆ. ವೈಜ್ಞಾನಿಕ ವಿಷಯದ ಕುರಿತು ಗ್ರಹಿಸಿ ತಿಳಿದುಕೊಳ್ಳಬೇಕಾಗಿದ್ದು ಪ್ರತಿಯೊಬ್ಬರ ಜವಾಬ್ದಾರಿ‘ ಎಂದರು.

‘ಸಮೂಹ ಮಾಧ್ಯಮಗಳಲ್ಲಿ ವಿಜ್ಞಾನದ ಕುರಿತು ಸುದ್ದಿ ಮಾಡುವುದು ಸುಲಭದ ಮಾತಲ್ಲ. ವರದಿ ಮಾಡುವವರು ಬಹಳ ಜಾಗರೂಕತೆಯಿಂದ ಎಲ್ಲ ವಿಷಯವನ್ನು ಅರಿತುಕೊಂಡು ವರದಿ ಮಾಡಬೇಕಾಗುತ್ತದೆ. ವಿಜ್ಞಾನದ ಕುರಿತು ಪ್ರಾದೇಶಿಕ ಭಾಷೆಗಳಲ್ಲಿ ತಿಳಿಸುವುದು ಒಂದು ಸವಾಲಿನ ವಿಷಯ’ ಎಂದರು.

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಮಾತನಾಡಿ, ಇಂದಿನ ದಿನಮಾನದಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ವಿಜ್ಞಾನ ಬರವಣಿಗೆ ಮಾಡುವವರು ಬೆರಳೆಣಿಕೆಯಷ್ಟು ಮಾತ್ರ. ವಿಜ್ಞಾನ ಬರವಣಿಗೆಯಲ್ಲಿ ಸಾಕಷ್ಟು ಅವಕಾಶಗಳಿದ್ದು, ವಿಜ್ಞಾನ ಪದವೀಧರರು ಬರವಣಿಗೆಯ ಕೌಶಲಗಳನ್ನು ಕರಗತ ಮಾಡಿಕೊಳ್ಳುವ ಮೂಲಕ ಅವಕಾಶಗಳನ್ನು ಗಿಟ್ಟಿಸಿಕೊಳ್ಳಬಹುದಾಗಿದೆ‘ ಎಂದರು.

ವಿಜ್ಞಾನ ಬರಹಗಾರ ಶ್ರೀರಾಮ್ ಭಟ್ಟ, ವಿಜ್ಞಾನ ಶಿಕ್ಷಕ ರಮೇಶ ವಿಠಪ್ಪ ಬಳ್ಳ ವಿಶೇಷ ಉಪನ್ಯಾಸ ನೀಡಿದರು. ಬಾಬು ಲಮಾಣಿ, ಸಹಾಯಕ ಪ್ರಾಧ್ಯಾಪಕ ಸಂದೀಪ ನಾಯಕ, ಡಾ.ತಹಮೀನಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT