ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯದ ಐದು ಕಡೆ 45 ಡಿಗ್ರಿ ಸೆಲ್ಸಿಯಸ್‌ ಗಡಿ ದಾಟಿದ ಉಷ್ಣಾಂಶ! 

Published 1 ಮೇ 2024, 14:53 IST
Last Updated 1 ಮೇ 2024, 14:53 IST
ಅಕ್ಷರ ಗಾತ್ರ

ವಿಜಯಪುರ: ರಾಜ್ಯದ ಐದು ಜಿಲ್ಲೆಗಳಲ್ಲಿ ಅತಿ ಹೆಚ್ಚು ಉಷ್ಣಾಂಶ ಮಂಗಳವಾರ (ಏಪ್ರಿಲ್‌ 30) ದಾಖಲಾಗಿದೆ.

‘ಬಾಗಲಕೋಟೆ ಜಿಲ್ಲೆಯ ಕರಡಿ 45.3, ರಾಯಚೂರು ಜಿಲ್ಲೆಯ ಗಿಲ್ಲೆಸೂಗೂರಿನಲ್ಲಿ 45.2, ಯಾದಗಿರಿ ಜಿಲ್ಲೆಯ ಗೋಗಿಯಲ್ಲಿ 45.1 ಮತ್ತು ವಿಜಯಪುರ ಜಿಲ್ಲೆಯ ನಾಲತವಾಡದಲ್ಲಿ 45 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ’ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್‌, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಗದಗ, ಹಾಸನ, ಹಾವೇರಿ, ಕಲಬುರ್ಗಿ, ಕೋಲಾರ, ಮಂಡ್ಯ, ಮೈಸೂರು, ರಾಯಚೂರು, ಶಿವಮೊಗ್ಗ, ವಿಜಯಪುರ, ತುಮಕೂರು, ಉಡುಪಿ, ಉತ್ತರ ಕನ್ನಡ, ಯಾದಗಿರಿ ಜಿಲ್ಲೆಯ ಬಹುತೇಕ ಕಡೆ 40 ಡಿಗ್ರಿ ಸೆಲ್ಸಿಯಸ್‌ಗೂ ಅಧಿಕ ತಾಪಮಾನ ದಾಖಲಾಗಿದೆ. 

ವಿಜಯಪುರದಲ್ಲಿ ಉಚಿತವಾಗಿ ಇಡಲಾಗಿರುವ ತಂಪಾದ ನೀರನ್ನು ಕುಡಿಯುತ್ತಿರುವ ಜನ
–ಪ್ರಜಾವಾಣಿ ಚಿತ್ರ
ವಿಜಯಪುರದಲ್ಲಿ ಉಚಿತವಾಗಿ ಇಡಲಾಗಿರುವ ತಂಪಾದ ನೀರನ್ನು ಕುಡಿಯುತ್ತಿರುವ ಜನ –ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT