ಶನಿವಾರ, ಡಿಸೆಂಬರ್ 5, 2020
24 °C
ವಾಲ್ಮೀಕಿ ಜಯಂತಿಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಶ್ಲಾಘನೆ

ಜಗತ್ತಿಗೆ ಜ್ಞಾನದ ಬೆಳಕು ನೀಡಿದ ದಾರ್ಶನಿಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಜಾತಿ, ಮತ ಮೀರಿದ ಮಾನವೀಯ ಕವಿ ಮಹರ್ಷಿ ವಾಲ್ಮೀಕಿ ಜಗತ್ತಿಗೆ ಜ್ಞಾನದ ಬೆಳಕು ನೀಡಿದ ಶ್ರೇಷ್ಠ ದಾರ್ಶನಿಕ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತದಿಂದ ವಾಲ್ಮೀಕಿ ಜಯಂತಿಯಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರೂ ಕೂಡ ವಾಲ್ಮೀಕಿ ರಾಮಾಯಣ ಓದುವ ಮೂಲಕ ಜೀವನದಲ್ಲಿ ಮೌಲ್ಯ, ಸಂಸ್ಕಾರಗಳನ್ನು ಅಳವಡಿಸಿಕೊಳ್ಳಬೇಕಿದೆ. ವಾಲ್ಮೀಕಿ ವ್ಯಕ್ತಿತ್ವ, ಚರಿತ್ರೆ ತಿಳಿದುಕೊಳ್ಳಬೇಕಿದೆ ಎಂದು ಹೇಳಿದರು.

ಸತ್ಪುರುಷರು, ಮಹಾತ್ಮರು ಸದಾಕಾಲವೂ ಸ್ಮರಣೀಯರಾಗಿದ್ದು, ಇವರ ತತ್ವ, ಆದರ್ಶಗಳ ಬೆಳಕಿನಲ್ಲಿ ನವ ಸಮಾಜ ನಿರ್ಮಾಣಕ್ಕೆ ಯುವ ಸಮೂಹ ಸಂಕಲ್ಪಿಸಬೇಕಿದೆ ಎಂದು ಹೇಳಿದರು.

ಮಹಿರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಗಣ್ಯರು ಹಾಗೂ ಮುಖಂಡರು ಪುಷ್ಪಾರ್ಚನೆ ಮಾಡಿ, ಪೂಜೆ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಸಮಾಜದ ಮುಖಂಡರಾದ ರವಿ ಬಿಸನಾಳ, ಮಲ್ಲಪ್ಪ ಕೌಲಗಿ, ಮರಳಸಿದ್ಧ ನಾಯ್ಕೋಡಿ, ಚಂದ್ರು ನಾಟಿಕಾರ, ಸದಾಶಿವ ಕನ್ನೂರ, ಕೆ.ಎಚ್ ಸಂದಿಮನಿ, ಕಾಳಪ್ಪ ಕಿರಸೂರ, ದುಂಡಪ್ಪ, ಬಿ.ಎಚ್ ನಾಡಿಗೇರ, ಸಮಾಜ ಕಲ್ಯಾಣ ಅಧಿಕಾರಿ ರಾಮನಗೌಡ ಕನ್ನೊಳ್ಳಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ, ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷಾ ಶೆಟ್ಟಿ, ಅಡಿವೆಪ್ಪ ಸಾಲಗಲ್, ಭೀಮರಾಯ ಜಿಗಜಿಣಗಿ, ಸೋಮನಗೌಡ ಕಲ್ಲೂರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು