ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವ್ಯವಸ್ಥೆ ಹಾಳು ಮಾಡುವ ಹುನ್ನಾರ ನಡೆಯದು: ಬಸನಗೌಡ ಪಾಟೀಲ ಯತ್ನಾಳ

Published 25 ಡಿಸೆಂಬರ್ 2023, 16:18 IST
Last Updated 25 ಡಿಸೆಂಬರ್ 2023, 16:18 IST
ಅಕ್ಷರ ಗಾತ್ರ

ವಿಜಯಪುರ: ನಗರದ ಮಾರುಕಟ್ಟೆ ಪ್ರದೇಶದಲ್ಲಿ ಸುಗಮ ಸಂಚಾರ, ಸ್ವಚ್ಛತೆ, ವ್ಯಾಪಾರಸ್ಥರಿಗೆ ತೊಂದರೆ ಆಗದಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ, ಕೆಲವರು ವ್ಯವಸ್ಥೆ ಕೆಡಿಸುವ ಹುನ್ನಾರ ನಡೆಸಿದ್ದು, ಯಾವುದೇ ಕಾರಣಕ್ಕೂ ಅದು ನಡೆಯದು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ನಗರದಲ್ಲಿ ಸೋಮವಾರ ವ್ಯಾಪಾರಸ್ಥರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಾರುಕಟ್ಟೆಯಲ್ಲಿನ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಬೀದಿದೀಪ ಅಳವಡಿಕೆ ಮಾಡಲಾಗಿದೆ, ಸ್ವಚ್ಛತೆಗೂ ಆದ್ಯತೆ ನೀಡಲಾಗಿದೆ. ಮುಂದೆ ಪ್ರತಿ ನಾಲ್ಕೈದು ಅಂಗಡಿಗಳ ಮಧ್ಯ ಕಸದ ಡಬ್ಬಿ ಇಟ್ಟು, ಎರಡು ದಿನಕ್ಕೊಮ್ಮೆ ತೆಗೆದುಕೊಂಡು ಹೋಗಲು ಪಾಲಿಕೆ ಅಧಿಕಾರಿಗಳಿಗೆ ತಿಳಿಸಲಾಗುವುದು ಎಂದರು.

ಬೀದಿ ಬದಿ ವ್ಯಾಪಾರಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ, ಸೂಕ್ತವಾದ ನಿಗದಿತ ಸ್ಥಳಾವಕಾಶ ಕಲ್ಪಿಸಿ, ಅಂಗಡಿಕಾರರಿಗೆ ಅನುಕೂಲ ಮಾಡಿಕೊಡಲು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

ಬಟ್ಟೆ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಗೋಕುಲ ಮಹಿಂದ್ರಕರ, ಮಹಾನಗರ ಪಾಲಿಕೆ ಸದಸ್ಯರು, ವ್ಯಾಪಾರಸ್ಥರ ಸಂಘದ ಪದಾಧಿಕಾರಿಗಳು, ವ್ಯಾಪಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT