ಮಂಗಳವಾರ, ಡಿಸೆಂಬರ್ 1, 2020
26 °C

ವಿಜಯಪುರ: ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ- ಮೂವರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಚಿಕ್ಕಗಲಗಲಿ ಗ್ರಾಮದ ಹತ್ತಿರ ಎರಡು ಬೈಕುಗಳ ನಡುವೆ ಬುಧವಾರ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಮೃತಪಟ್ಟಿದ್ದು, ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಚಿಕ್ಕಗಲಗಲಿಯಿಂದ ನಂದಿ ಸಕ್ಕರೆ ಕಾರ್ಖಾನೆ ಕಡೆಗೆ ಹೊರಟ ಹೊಂಡಾ ಶೈನ್‌ ಬೈಕ್‌ನಲ್ಲಿ ಹೊರಟ ಗಲಗಲಿ ಗ್ರಾಮದ ನಿವಾಸಿಗಳಾದ ಲಕ್ಷಣ ಮಾದರ, ಕಾಶಿ ಬಾತಿ ಮಾದರ ಹಾಗೂ ನಂದಿ ಸಕ್ಕರೆ ಕಾರ್ಖಾನೆ ಕಡೆಯಿಂದ ಚಿಕ್ಕಗಲಗಲಿ ಕಡೆಗೆ ಪಲ್ಸರ್‌ ಬೈಕ್‌ನಲ್ಲಿ ಹೊರಟ ಅನೀಲ ಮೇಲಗೇರಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಶಿವಪೂಜಯ್ಯ ಹಿರೇಮಠ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 
ಈ ಕುರಿತು ಬಬಲೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು