ಮಂಗಳವಾರ, ಜೂನ್ 22, 2021
22 °C

ಸಿಡಿಲು ಬಡಿದು ಮೂವರು ಸಾವು; ಇಬ್ಬರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಡಿಲು–ಸಾಂದರ್ಭಿಕ ಚಿತ್ರ

ವಿಜಯಪುರ: ನಗರದ ಟಕ್ಕೆ ಬಳಿ ಮಸೀದಿ ಬಳಿ ಬುಧವಾರ ಸಂಜೆ ಸಿಡಿಲು ಬಡಿದು ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಅಶೋಕರಾಮ ಕಾರಜೋಳ(48), ಬಾಷಾಸಾಬ್‌ ಕರಜಗಿ(40) ಮತ್ತು ಜಾವಿದ್‌ ಹಾಜಿಸಾಬ್‌ ಜಾಲಗೇರಿ(33) ಸಾವಿಗೀಡಾಗಿದ್ದಾರೆ.

ಸಬೀನಾ ಮತ್ತು ಇನ್ನೊಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಲದಿಂದ ಬರುವ ವೇಳೆ ಗಾಳಿ, ಮಳೆ ಆರಂಭವಾದ ಕಾರಣ ರಕ್ಷಣೆಗಾಗಿ ಟಕ್ಕೆ ದರ್ಗಾ ಬಳಿ ಇರುವ ಮಸೀದಿಯಲ್ಲಿ ರಕ್ಷಣೆ ಪಡೆದುಕೊಂಡಿದ್ದರು. ಈ ಸಂದರ್ಭದಲ್ಲಿ ಸಿಡಿಲು ಬಡಿದಿದೆ ಎಂದು ವಿಜಯಪುರ ಗ್ರಾಮೀಣ ಠಾಣೆ ಪಿಎಸ್‌ಐ ಆನಂದ ಟಕ್ಕನವರ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು