ಸೋಮವಾರ, ಮಾರ್ಚ್ 27, 2023
31 °C

ತಿಕೋಟಾ: ಲಘು ಭೂಕಂಪನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಿಕೋಟಾ: ತಾಲ್ಲೂಕಿನ ಘೋಣಸಗಿ, ಕಳ್ಳಕವಟಗಿ, ಹುಬನೂರ, ಟಕ್ಕಳಕಿ, ಸೋಮದೇವರಹಟ್ಟಿ, ಮಲಕನದೇವರಹಟ್ಟಿ, ಸಿದ್ದಾಪುರ ಕೆ, ಸುತ್ತಮುತ್ತಲಿನ ಗ್ರಾಮಗಳಲ್ಲಿ ಹಾಗೂ ಮಹಾರಾಷ್ಟ್ರದ ಬಿವರಗಿ, ಮೊರಬಗಿ ಗ್ರಾಮದ ಸುತ್ತಮುತ್ತ ಗುರುವಾರ ರಾತ್ರಿ 10.5 ಮತ್ತು ಮಧ್ಯರಾತ್ರಿ 1.47ಕ್ಕೆ ಎರಡು ಬಾರಿ ಲಘು ಭೂಕಂಪನವಾಗಿದೆ.

ನಿದ್ರೆ ಮಂಪರಿನಲ್ಲಿದ್ದ ಜನರಿಗೆ ಭೂಕಂಪನದ ಅನುಭವ ಅಷ್ಟಾಗಿ ಆಗಿಲ್ಲ. ಆದರೆ, ಕೆಲವರು ಕಂಪನದ ಅನುಭವದಿಂದ ಮನೆಯಿಂದ ಹೊರಗೆ ಓಡಿ ಬಂದರು. 

ರಿಕ್ಟರ್ ಮಾಪಕದಲ್ಲಿ 2.7 ರಷ್ಟು ತೀವ್ರತೆ ದಾಖಲಾಗಿದೆ. ಭೂಕಂಪನದ ಕೇಂದ್ರ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಬಿವರಗಿ ಗ್ರಾಮ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು